ಗಂಗಾಧರ ಸ್ವಾಮೀಜಿ ಅವರನ್ನು ಪೀಠಾಧಿಪತಿಯನ್ನಾಗಿ ನೇಮಕ ಮಾಡಿದ್ದು ಭಾರೀ ವಿರೋಧಕ್ಕೆ ಕಾರಣವಾಗಿದ್ದು ಭಕ್ತರು ಆಕ್ರೊಶಗೊಂಡಿದ್ದಾರೆ.
ಮಠದ ಆಸ್ತಿ ಹೊಡೆಯಲು ರಂಭಾಪುರಿ ಶ್ರೀಗಳು ಷಡ್ಯಂತ್ರ ನಡೆಸಿದ್ದಾರೆ. ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ಕಲಾದಗಿ ಗ್ರಾಮಸ್ಥರನ್ನ ಕೇಳಿಲ್ಲ. ತಮ್ಮ ಸಂಬಂಧಿಯನ್ನೇ ಉತ್ತರಾಧಿಕಾರಿಯನ್ನಾಗಿ ನೇಮಿಸಿದ್ದಾರೆ. ವ್ಯಾಜ್ಯ ಕೋರ್ಟ್ ನಲ್ಲಿದೆ. ಅಲ್ಲಿಯವರೆಗೆ ಉತ್ತರಾಧಿಕಾರಿ ಇರಿಸೋದು ಸರಿಯಲ್ಲ. ನ್ಯಾಯ ಸಿಗೋವರೆಗೆ ಹೋರಾಟ ಮುಂದುವರೆಸುತ್ತೇವೆ. ಈ ಕಾರಣಕ್ಕೆ ರಂಭಾಪುರಿ ಶ್ರೀ ಗ್ರಾಮಕ್ಕೆ ಬಂದಾಗ ವಿರೋಧಿಸಿದ್ದೇವೆ ಎಂದು ಪ್ರತಿಭಟನೆ ನಡೆಸಿದ ಭಕ್ತರು ಮತ್ತು ಮಹಿಳೆಯರು ಹೇಳಿದ್ದಾರೆ.