ಸಾಮಾಜಿಕ ಪರಿಶೋಧನಾ ಗ್ರಾಮಸಭೆ! ದೇಶನೊರ.

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ನೇಸರಗಿ- ಸಮೀಪದ ದೇಶನೂರ ಗ್ರಾಮ ಪಂಚಾಯತ ಸಭಾ ಭವನದಲ್ಲಿ ನಡೆದ ಸಾಮಾಜಿಕ ಪರಿಶೋಧನಾ ಗ್ರಾಮಸಭೆ ನಡೆಯಿತು.
 ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುವುದು ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಅರ್ಹ ಪ್ರತಿ ಕುಟುಂಬವು ಉದ್ಯೋಗ ಚೀಟಿ ಹೊಂದುವ ಹಕ್ಕು ಹೊಂದಿರುತ್ತಾರೆ. ಉದ್ಯೋಗ ಚೀಟಿಯಲ್ಲಿ ಹೆಸರಿರುವ ಕುಟುಂಬದ ಎಲ್ಲಾ ವಯಸ್ಕರು, ಅಕುಶಲ ದೈಹಿಕ ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಹಕ್ಕುಳ್ಳವರಾಗಿರುತ್ತಾರೆ ಎಂದು ಪಿಡಿಓ ಬಸನಗೌಡ ಪಾಟೀಲ ತಿಳಿಸಿದರು.
ಅವರು ಇಂದು ಗ್ರಾಮೀಣ ಅಭಿವೃದ್ಧಿ ಇಲಾಖೆ, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತಿಗಳ ಸಹಯೋಗದಲ್ಲಿ ಗ್ರಾಮ ಪಂಚಾಯತಿಯ ದೇಶನೂರ ಗ್ರಾಮ ಪಂಚಾಯತ ಸಭಾಭವನದಲ್ಲಿ 2022-2023 ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು.

 ಸಾಮಾಜಿಕ ಪರಿಶೋಧನೆಯಲ್ಲಿ ಅನುಷ್ಟಾನಗೊಂಡ ಕಾಮಗಾರಿಗಳನ್ನು ಮಂಡಿಸಿ ನಂತರ ಯೋಜನೆಯಡಿ ಇರುವ ವೈಯಕ್ತಿಕ ಕಾಮಗಾರಿಗಳ ಬಗ್ಗೆ ಗ್ರಾಮ ಸಭೆಯಲ್ಲಿ ತಿಳಿಸಲಾಯಿತು. ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಉದ್ಯೋಗವನ್ನು ಒದಗಿಸಿ ಅವರ ಜೀವನಕ್ಕೆ ಭದ್ರತೆ ಒದಗಿಸುವುದು. ದೀರ್ಘಕಾಲ ಬಾಳಿಕೆ ಬರುವ ಆಸ್ತಿಗಳನ್ನು ಸೃಜಿಸುವುದು. ಗ್ರಾಮೀಣ ಬಡವರ ಜೀವನೋಪಾಯದ ಮಟ್ಟವನ್ನು ಸುಧಾರಿಸುವುದು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ಸುರೇಖಾ ಕೇದಾರಿ, ಬಿ ಎಪ್ ಟಿ ಸಿದ್ದು ಕಂಬಾರ, ಕಾರ್ಯದರ್ಶಿ ವಿ ಜಿ ಪಟ್ಟೇದ, ಡಿಇಓ ಕುಮಾರ ಕೆಳಗಿನಮನಿ, ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕ ಸಚೀನ ಪಾಟೀಲ, ರೇಣುಕಾ ಹೊಣ್ಣಯ್ಯನವರ, ಚನ್ನಯ್ಯ ಕುಲಕರ್ಣಿ, ಜಿಕೆಎಮ್ ಎಸ್ ಶಶಿಕಲಾ ತಳವಾರ, ಮಂಜುಳಾ ಚಿಕ್ಕೇರೂರ, ರತ್ನವ್ವ ತಳವಾರ, ಪದ್ಮಾವತಿ ಮಾರಿಹಾಳ, ಅಂಗನವಾಡಿ ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ ಸದಸ್ಯರು ಕೂಲಿ ಕಾರ್ಮಿಕರು ಹಾಜರಿದ್ದರು.

Post a Comment

0Comments

Post a Comment (0)