KKNEWES ಉತ್ತರಕನ್ನಡ Siddaramaiah ಗೆ ಟೀಕೆ; ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು.
AD
ಮುಂಡಗೋಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿದ್ದರಾಮುಲ್ಲಾಖಾನ ಎಂದು ವಾಗ್ದಾಳಿ ನಡೆಸಿದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆ. 23ರ ಶುಕ್ರವಾರ ಪಾಳಾ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂಸದ ಅನಂತ್ ಕುಮಾರ್ ಅವರು ಸಿದ್ದರಾಮುಲ್ಲಾಖಾನ ಎಂದು ಟೀಕಿಸಿದ್ದರಲ್ಲದೆ ಸರಕಾರದ ವಿರುದ್ದ ಹರಿಹಾಯ್ದಿದ್ದರು.
ಈ ಕುರಿತು ಮುಂಡಗೋಡ ಪೊಲೀಸರು ಸ್ವಯಂ ಪ್ರೇರಿತವಾಗಿ ಶನಿವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ.