ಕಾಂಗ್ರೆಸ್ ನಲ್ಲಿ ಲೋಕಸಭಾ ಚುನಾವಣೆಗೆ ಕುಟುಂಬಸ್ಥರಿಗೆ 5 ಟಿಕೆಟ್ ಅಂತಿಮ ಅಂತಿಮ...!
ಲೋಕಸಭೆ ಚುನಾವಣೆ 2024: ರಾಜ್ಯದ 2ನೇ ಪಟ್ಟಿಯಲ್ಲಿ 17 ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಬಹುತೇಕ ಫೈನಲ್
ಬೆಂಗಳೂರು: ರಾಜ್ಯದಲ್ಲಿ ಬಾಕಿ ಇರುವ 21 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ಒಟ್ಟು 17 ಕ್ಷೇತ್ರಗಳಿಗೆ ಟಿಕೆಟ್ ಅಂತಿಮಗೊಳಿಸಿದೆ. ಈ ಪೈಕಿ ಬಹುತೇಕ ಹೊಸ ಮುಖಗಳಾಗಿವೆ.
ಕುಟುಂಬಸ್ಥರಿಗೆ 5 ಟಿಕೆಟ್ ಅಂತಿಮ
ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳಕ್ಕರ್ ಪುತ್ರ ಮೃಣಾಲ್‌ಗೆ ಹಾಗೂ ಚಿಕ್ಕೋಡಿಯಿಂದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾಗೆ ಅವಕಾಶ ನೀಡಲಾಗಿದ್ದು, ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತ ಪಾಟೀಲ್‌ಗೆ ಬಾಗಲಕೋಟೆಯಿಂದ ಟಿಕೆಟ್ ನೀಡಲಾಗಿದೆ. ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನಗೆ ದಾವಣಗೆರೆಯಿಂದ ಹಾಗೂ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿಗೆ ಬೆಂಗಳೂರು ದಕ್ಷಿಣದಿಂದ ಟಿಕೆಟ್ ಅಂತಿಮಗೊಳಿಸಲಾಗಿದೆ.
ನಾಲ್ಕು ಕ್ಷೇತ್ರ ಪೆಂಡಿಂಗ್
ಕೋಲಾರ ಮೀಸಲು ಕ್ಷೇತ್ರದ ಟಿಕೆಟ್ ವಿಚಾರದಲ್ಲಿಕಗ್ಗಂಟು ಮುಂದುವರಿದಿದೆ. ಸಚಿವ ಕೆ.ಎಚ್.ಮುನಿಯಪ್ಪ ಅವರು ಪರಿಶಿಷ್ಟ ಎಡಗೈ ಕೋಮಿಗೆ ಹಾಗೂ ಮಾಜಿ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್ ಮತ್ತಿತರರು ಪರಿಶಿಷ್ಟ ಬಲಗೈ ಕೋಮಿನವರಿಗೆ ಟಿಕೆಟ್ ನೀಡುವಂತೆ ಜಟಾಪಟಿಗಿಳಿದಿದ್ದಾರೆ. ಚಾಮರಾಜನಗರ ಮೀಸಲು ಕ್ಷೇತ್ರದಲ್ಲಿ ಸುನಿಲ್ ಬೋಸ್‌ಗೆ ಪಕ್ಷದೊಳಗೆ ವಿರೋಧವಿರುವ ಹಿನ್ನೆಲೆಯಲ್ಲಿಇನ್ನೂ ಟಿಕೆಟ್ ಫೈನಲ್ ಮಾಡಿಲ್ಲ.