ನಮ್ಮ ಇತಿಹಾಸ, ಕಲೆ, ಸಂಸ್ಕೃತಿ ಬಗ್ಗೆ ಅರಿಯಲು ಕದಂಬ ಉತ್ಸವದಂತಹ ಉತ್ಸವಗಳು ಸಹಕಾರಿ: ಸಿಎಂ
ಕಾರವಾರ (ಬನವಾಸಿ) : ಯುವ ಪೀಳಿಗೆಗೆ ನಮ್ಮ ಇತಿಹಾಸ ಸಂಸ್ಕೃತಿ ಕಲೆ ಭಾಷೆ ಬಗ್ಗೆ ತಿಳಿಸಲು ಕದಂಬ ಉತ್ಸವದಂತಹ ಉತ್ಸವ ಗಳು ಸಹಕಾರಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಜಿಲ್ಲಾಡಳಿತ ಉತ್ತರಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃಧ್ದಿ ಪ್ರಾಧಿಕಾರ ವತಿಯಿಂದ ಕನ್ನಡದ ಪ್ರಥಮ ರಾಜಧಾನಿ ಬನವಾಸಿಯಲ್ಲಿ ನಡೆದ ಕದಂಬೋತ್ಸವ 2024 ನ್ನು ಉದ್ಘಾಟಿಸಿ ಮಾತನಾಡಿದರು.
ಇತಿಹಾಸ ತಿಳಿಯದವರು ಭವಿಸ್ಯ ನಿರ್ಮಿಸಲು ಸಾಧ್ಯವಿಲ್ಲ ವೆಂದು ಅಂಬೇಡ್ಕರ್ ತಿಳಿಸಿದ್ದಾರೆ. ಅದರಂತೆ ಇತಿಹಾಸ ವನ್ನು ತಿಳಿಸುವ ಉದ್ದೇಶದಿಂದ ರಾಜ್ಯದಲ್ಲಿ ಹಲವು ಉತ್ಸವ ಆಯೋಜಿಸಲಾಗುತ್ತಿದೆ ಎಂದರು.