ಮುರಗೋಡ ಶ್ರೀ ಮಹಾಂತ ದುರದುಂಡೇಶ್ವರ ಮಠದ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವ ಅದ್ದೂರಿಯಾಗಿ ಜರುಗಿತು.

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೈಲಹೊಂಗಲ: ಸಮೀಪದ ಮುರಗೋಡ ಶ್ರೀ ಮಹಾಂತ ದುರದುಂಡೇಶ್ವರ ಮಠದ ಜಾತ್ರಾ ಮಹೋತ್ಸವದ ಮಹಾರಥೋತ್ಸವವು ಬುಧವಾರ ಸಂಜೆ ಸಾವಿರಾರು ಸದ್ಭಕ್ತರ ನಡುವೆ ಅದ್ದೂರಿಯಾಗಿ ಜರುಗಿತು.

ತೆಂಗು, ಬಾಳೆ, ಮಾವಿನ ತೋರಣಗಳಿಂದ ಶೃಂಗರಿಸಿದ್ದ ರಥಕ್ಕೆ ಪೀಠಾಧಿಪತಿ ನೀಲಕಂಠ ಸ್ವಾಮಿಜಿ ಅನೇಕ ಗಣ್ಯರು ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

ಭಕ್ತರು ಬಾಳೆಹಣ್ಣು, ಉತ್ತತ್ತಿ ಹಾರಿಸಿ ಭಕ್ತಿ ಭಾವ ಮೆರೆದರು. ಶ್ರೀಮಠದಲ್ಲಿರುವ ಶ್ರೀ ಮಹಾಂತ ಗದ್ದುಗೆಗೆ ವಿಶೇಷ ಪೂಜೆಯನ್ನು ಭಕ್ತರು ಸಲ್ಲಿಸಿದರು.

ಮುರಗೋಡ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಇದ್ದರು.

Post a Comment

0Comments

Post a Comment (0)