ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಕೇಂದ್ರ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಇದು ಮೋದಿಯವರ 2ನೇಯ ಅವಧಿಯಲ್ಲಿ ನಡೆಯುತ್ತಿರುವ ಕೊನೆಯ ಸಭೆ. ಈ ಸಭೆಯಲ್ಲಿ 2047ರ ಹೊತ್ತಿಗೆ ಅಭಿವೃದ್ಧಿ ಭಾರತ ಕ್ಕಾಗಿ ಸಿದ್ಧಪಡಿಸಲಾಗುತ್ತಿರುವ ನೀಲ ನಕ್ಷೆಯ ಬಗ್ಗೆ ಚರ್ಚೆ ನಡೆಯಲಿದೆ. ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳೂ ಪಾಲ್ಗೊಳ್ಳುವ ಸಾಧ್ಯತೆ ಇದೆ. ಹೊಸದಿಲ್ಲಿಯ ಚಾಣಕ್ಯಪುರಿಯ ಸುಷ್ಮಾ ಸ್ವರಾಜ್ ಭವನದಲ್ಲಿ ಈ ಸಚಿವ ಸಂಪುಟ ಸಭೆ ನಡೆಯಲಿದೆ.
2047ರ ಹೊತ್ತಿಗೆ ಭಾರತವು 30 ಲಕ್ಷ ಕೋಟಿ ಡಾಲರ್ ಆರ್ಥಿಕತೆಯಾಗುವ ಗುರಿಯನ್ನು ಹಾಕಿಕೊಂಡಿದೆ. ಮುಂದಿನ ಒಂದೆರಡು ವಾರ ಗಳಲ್ಲಿ ಕೇಂದ್ರ ಚುನಾವಣ ಆಯೋಗವು ಲೋಕಸಭೆ ಚುನಾವಣ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. 2019ರಲ್ಲಿ ಆಯೋಗವು ಮಾ. 10ರಂದು ಲೋಕಸಭೆ ಚುನಾವಣ ವೇಳಾಪಟ್ಟಿಯನ್ನು ಪ್ರಕಟಿಸಿತ್ತು.