ಬೈಲಹೊಂಗಲ- ಅಸ್ಪೃಶ್ಯತೆ ಮತ್ತು ಅಸಮಾನತೆಯ ಆಂದೋಲನ ಪ್ರಾರಂಭಿಸಿ ಶೋಷಿತ ವರ್ಗಕ್ಕೆ ನ್ಯಾಯಒದಗಿಸಲು ಮಹಾನ್ ಹೋರಾಟ ನಡೆಸಿದ ದೇಶದ ಮಹಾನಾಯಕ ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಎಂದು ಜೈ ಭೀಮ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ರಮೇಶ ರಾಯಪ್ಪಗೋಳ ಅವರು ಹೇಳಿದರು.
ತಾಲೂಕಿನ ನೇಸರಗಿ ಗ್ರಾಮದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಆಯೋಜಿಸಿದ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 133ನೇ ಜಯಂತಿ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ, ಅವರು ದೇಶಕ್ಕೆ ಸಂವಿಧಾನವನ್ನು ನೀಡಿದ ಸಮಿತಿಯ ಅಧ್ಯಕ್ಷರಾಗಿ, ಸಮಾಜಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಇತಿಹಾಸಕಾರರಾಗಿ ಹೀಗೆ ಅವರಿಗೆ ತಿಳಿಯದ ಕ್ಷೇತ್ರವಿರಲಿಲ್ಲ ಎಂದು ನುಡಿದರು. ಹಿಂದುಳಿದವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಎಲ್ಲರ ಜೊತೆಗೆ ಕರೆದೊಯ್ಯುವ ಉದ್ದೇಶ ಅವರದಾಗಿತ್ತು ಎಂದರು.
ಡಾ. ಅಂಬೇಡ್ಕರ್ ಕೂಡ ಇದೇ ಹಾದಿಯಲ್ಲಿ ನಡೆದಿದ್ದರು. ಮುಂದೆ ನಮ್ಮ ಶಿಕ್ಷಣ ಸಂಘಟನೆ ಹೋರಾಟ ದ ಜೊತೆ ಬದುಕಬೇಕು ಮತ್ತು ಎಲ್ಲರನ್ನೂ ಬದುಕಲು ಬಿಡಬೇಕು ಎಂಬುದೇ ಮಹಾತ್ಮರ ಧ್ಯೇಯವಾಗಿತ್ತು. ಇದನ್ನು ನಾವೆಲ್ಲರೂ ತಮ್ಮ ಜೀವನದಲ್ಲಿ ಅಳವಡಸಿಕೊಳ್ಳಬೇಕೆಂದರು.
ಇಂದು 'ಸಂವಿಧಾನ ಶಿಲ್ಪಿ' ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನ. ಪ್ರತಿ ವರ್ಷ ಏಪ್ರಿಲ್ 14 ರಂದು ಭಾರತದ ಸಂವಿಧಾನ ಶಿಲ್ಪಿ, ಭಾರತ ಗ್ರಂಥವೇ ಸಂವಿಧಾನ. ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥ
ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮ ಹೆಮ್ಮೆಯ ಸಂವಿಧಾನ ಶಿಲ್ಪಿ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ. ಬಾಬಾ ಸಾಹೇಬರ ಚಿಂತೆನೆಗಳು ಇಂದಿಗೂ ಯುವಜನೆತೆಗೆ ಸ್ಪೂರ್ತಿದಾಯಕ ಎಂದರು.
ಈ ಸಂಧರ್ಭದಲ್ಲಿ ರುದ್ರಪ್ಪ ರಾಯಪ್ಪಗೋಳ, ಶ್ರೀನಿವಾಸ ಹಮ್ಮನ್ನವರ, ಯಲ್ಲಪ್ಪ ಹಮ್ಮನ್ನವರ, ರಾಘು ಮದೇನ್ನವರ, ಈಶ್ವರ ಮಾಳಗಿ, ವಿನೋದ ರಾಯಪ್ಪಗೋಳ, ಮನೋಜ ಮಾಳಗಿ, ವಿನಾಯಕ ರಾಯಪ್ಪಗೋಳ, ಮಂಜುನಾಥ ರಾಯಪ್ಪಗೋಳ, ಗೌತಮ್ ರಾಯಪ್ಪಗೋಳ, ಪ್ರಕಾಶ ಕೆಳಗಿನಮನಿ ಇದ್ದರು.