ನೇಹಾ ಹಿರೇಮಠ ಅವರ ಹತ್ಯೆ ಖಂಡಿಸಿ ಬೈಲಹೊಂಗಲದಲ್ಲಿ ಪ್ರತಿಭಟನೆ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ನೇಹಾ ಹಿರೇಮಠ ಅವರ ಹತ್ಯೆ ಖಂಡಿಸಿ ಬೈಲಹೊಂಗಲ ಬಜರಂಗದಳದ ಕಾರ್ಯಕರ್ತರಿಂದ ಪ್ರತಿಭಟನೆ

ಬೈಲಹೊಂಗಲ: ಫಯಾಜ್‌ನನ್ನ ಗಲ್ಲಿಗೇರಿಸುವಂತೆ ಒತ್ತಾಯಿಸಿ ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ

ಬೈಲಹೊಂಗಲ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠಳನ್ನ ಬರ್ಬರವಾಗಿ ಹತ್ಯೆ ಮಾಡಿದ ಫಯಾಜ್ ನನ್ನ ಕೂಡಲೇ ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿದ ಮುಖಂಡರು ಟೈರ್ಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಉಪ ವಿಭಾಗಾಧಿಕಾರಿಗಳ ಕಚೇರಿವರೆಗೆ ಹತ್ಯೆ ಮಾಡಿದ ಫಯಾಜ್ ನನ್ನು ಗಲ್ಲಿಗೇರಿಸಿ, ಗಲ್ಲಿಗೇರಿಸಿ ಎಂದು ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದರು. ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಪ್ರಮೋದ್ ಕುಮಾರ್ ವಕ್ಕುಂದಮಠ ಮಾತನಾಡಿ, ಆರೋಪಿ ಫಯಾಜ್ ಮೇಲೆ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಯಾವುದೇ ಕಾರಣಕ್ಕೂ ಕೊಲೆ ಆರೋಪಿಗೆ ಕನಿಕರ ತೋರದೆ ಗಲ್ಲು ಶಿಕ್ಷೆಗೆ ಗುರಿ ಮಾಡಬೇಕು. ಇದರಿಂದ ಕೊಲೆ ಆದ ವಿದ್ಯಾರ್ಥಿನಿ ಆತ್ಮಕ್ಕೆ ಶಾಂತಿ ದೊರಕಿಸಿಕೊಡಬೇಕು. ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು. ಸರ್ಕಾರ ಒಂದು ವೇಳೆ ಮುಸ್ಲಿಂರ ಓಲೈಕೆಗಾಗಿ ವಿದ್ಯಾರ್ಥಿನಿಯ ಕೊಲೆ ಪ್ರಕರಣದಲ್ಲಿ ಕಠಿಣ ಕ್ರಮ ಜರುಗಿಸದೇ ಹೋದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಡಾ.ಮಹಾಂತೇಶ ಶಾಸ್ತ್ರೀ ಆರಾದ್ರಿಮಠ, ವಿಶ್ವನಾಥ ಹಿರೇಮಠ, ಗೌತಮ ಇಂಚಲ, ಗಿರೀಶ ಹರಕುಣಿ, ಅಶೋಕ ಸವದತ್ತಿ, ನಾರಾಯಣ ನಲವಡೆ, ವಿವೇಕ ಪೂಜೇರ, ಜಗದೀಶ ಲೋಕಾಪುರ, ಅಜ್ಜಪ್ಪ ಕುಡಸೋಮಣ್ಣವರ, ಶಿವಾನಂದ ಕುಡಸೋಮಣ್ಣವರ, ಸಂಗಮೇಶ ಸವದತ್ತಿಮಠ, ಸುನೀಲ ಸೊಪ್ಪಿಮಠ, ರವಿ ಹುಲಕುಂದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಇದ್ದರು.

Post a Comment

0Comments

Post a Comment (0)