ಶಿವಮೊಗ್ಗ : ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಪುತ್ರಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಒಡಿ ತನಿಖೆ ಒಪ್ಪಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸುವ ಮೂಲಕ ಕೊನೆಗೂ ಜನರ ಒತ್ತಡಕ್ಕೆ ತಲೆಬಾಗಿದೆ.
ನೇಹಾ ಹಿರೇಮಠ ಹತ್ಯೆ ಖಂಡಿಸಿ ಕಳೆದ ಮೂರು ದಿನಗಳಿಂದ ಜನ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದರು. ಅಷ್ಟೇ ಅಲ್ಲದೆ ಆರೋಪಿಯನ್ನು ಗಲ್ಲು ಶಿಕ್ಷೆಗೆ ಗುರಿಯಾಗಿಸಬೇಕು ಎಂಬ ಆಕ್ರೋಶವೂ ಜೋರಾಗಿತ್ತು. ಈ ನಡುವೆ ಸಿಎಂ ಹಾಗೂ ಗೃಹ ಸಚಿವರ ಹೇಳಿಕೆಗಳು ಜನರನ್ನು ಕೆರಳಿಸಿದ್ದವು.
ಈ ಕುರಿತು ಮಾಹಿತಿ ನೀಡಿರುವ ಸಿಎಂ ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.