ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಯರಗಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆಗಮನ...
ಲೋಕಸಭೆ ಚುನಾವಣೆಯ ಅಂಗವಾಗಿ ನಾಳೆ ಯರಗಟ್ಟಿಯ ಬಸವೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ನವರು ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿ ಕೆ ಶಿವಕುಮಾರ ಇವರ ನೇತೃತ್ವದಲ್ಲಿ ನಡೆಯಲಿರುವ ಸಮಾವೇಶದ ಹಿನ್ನೆಲೆಯಲ್ಲಿ ಯರಗಟ್ಟಿಯ ಪ್ರೌಢಶಾಲೆಯ ಆವರಣಕ್ಕೆ ತೆರಳಿದ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ ಅಲ್ಲಿನ ಪೂರ್ವಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದು, ಪರಿಶೀಲನೆ ನಡೆಸಿದರು.
ಈ ಸಮಯದಲ್ಲಿ ಪ್ರಕಾಶ ವಾಲಿ, ನಿಖಿಲ್ ದೇಸಾಯಿ, ನೀಲಕಂಠ ಸಿದ್ದಬಸಣ್ಣವರ, ಮಲಿಕಸಾಬ್ ಬಾಗವಾನ್, ಶಂಕರ್ ಇಟ್ನಾಳ ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.