ಬೆಳಗಾವಿ
ಅಕ್ರಮ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಹಿನ್ನಲೆಯಲ್ಲಿ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಸುವರ್ಣ ವಿಧಾನಸೌಧದ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.
ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ಹೊರಟ್ಟಿದ್ದ ಲಾರಿಯಲ್ಲಿ ಸುಮಾರು 12 ಕ್ಕೂ ಹೆಚ್ಚು ಗೋವುಗಳನ್ನು ಅಕ್ರಮ ಸಾಗಾಟ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ವಿಷಯ ತಿಳಿದ ಹಿಂದೂಪರ ಸಂಘಟನೆಯ 50 ಕ್ಕೂ ಅಧಿಕ ಯುವಕರು ಬೆಳಗಾವಿ ಹೊರವಲಯದ ಸುವರ್ಣಸೌಧದ ಬಳಿ ಲಾರಿ ತಡೆದು ಗೋವುಗಳನ್ನು ರಕ್ಷಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಲಾರಿ ಚಾಲಕನ ಜೊತೆ ವಾಗ್ವಾದ ನಡೆದಿದ್ದು ಉದ್ರಿಕ್ತರ ಗುಂಪು ಲಾರಿಗೆ ಕಲ್ಲೆಸೆದು ಗಾಜುಗಳನ್ನು ಪುಡಿ ಮಾಡಿದ್ದಾರೆ. ಇನ್ನೂ ಚಾಲಕ ಮೇಲೆ ಹಲ್ಲೆ ನಡೆಸಲಾಗಿದೆ.
ಘಟನೆ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡರ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.