Karnataka 2nd PUC Result 2024: ಪಿಯುಸಿ ಫಲಿತಾಂಶ ಪ್ರಕಟ:ಉಡುಪಿಗೆ ಎರಡನೇ ಸ್ಥಾನ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಉಡುಪಿ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಬುಧವಾರ(ಏ.10) ಪ್ರಕಟಗೊಂಡಿದ್ದು,ದಕ್ಷಿಣ ಕನ್ನಡ ಮೊದಲ ಸ್ಥಾನ ಪಡೆದಿದ್ದು,ಉಡುಪಿ ಜಿಲ್ಲೆ ರಾಜ್ಯದಲ್ಲೇ ದ್ವಿತೀಯ ಸ್ಥಾನ ಪಡೆದಿದೆ.
ವಿಜ್ಞಾನ ವಿಭಾಗದಲ್ಲಿ ವಿದ್ಯೋದಯ ಪಿಯು ಕಾಲೇಜಿನ ವಿದ್ಯಾರ್ಥಿನಿ ವೈಭವಿ ಆಚಾರ್ಯ 597 ಅಂಕ, ಕಾರ್ಕಳ ಜ್ಞಾನ ಸುಧಾ ಕಾಲೇಜಿನ ವಿದ್ಯಾರ್ಥಿ ಸಮ್ಯಕ್ ಆರ್. ಪ್ರಭು 595 ಅಂಕ, ವಾಣಿಜ್ಯ ವಿಭಾಗದಲ್ಲಿ ಪೂರ್ಣಪ್ರಜ್ಞ ಪಿಯು ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ಎಸ್.ಎಚ್ 596 ಅಂಕ ಪಡೆಯುವ ಮೂಲಕ ರಾಜ್ಯ ಟಾಪರ್ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆ ಹೊಸ ವಿದ್ಯಾರ್ಥಿಗಳ ಒಟ್ಟಾರೆ ಶೇ.96.80 ಫಲಿತಾಂಶ ಪಡೆದಿದ್ದಾರೆ. ಕಳೆದ ವರ್ಷ ಶೇ.95.24ರಷ್ಟು ಫಲಿತಾಂಶ ಪಡೆದಿದ್ದಾರೆ.

Post a Comment

0Comments

Post a Comment (0)