ರೈತರಿಗೆ ಬೆಳೆ ಹಾನಿ ಪರಿಹಾರ ಹೊಸ ಮಾರ್ಗಸೂಚಿ ಪ್ರಕಟಣೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0


ರಾಜ್ಯದಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರ ಜಮಾ ಆಗುತ್ತಿದ್ದೂ ಪರಿಹಾರ ಹಣ ಜಮಾ ಆಗದ ರೈತರಿಗೆ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮತ್ತು ಬ್ಯಾಂಕ್ ನ ಅಧಿಕಾರಿಗಳಿಗೂ ಸಹಿತ ಹೊಸ ಆದೇಶ ಮಾಡಲಾಗಿದ್ದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ
1,49,262 30 ₹195.55 ಕೋಟಿ ಬರ ಪರಿಹಾರ ಜಮಾ ಮಾಡಲಾಗುತ್ತಿದೆ. ಪರಿಹಾರ ಜಮಾ ಆಗದ ರೈತರು ಆಯಾ ತಾಲ್ಲೂಕಿನಲ್ಲಿ ಆರಂಭಿಸಿರುವ ಸಹಾಯವಾಣಿ ಕೇಂದ್ರಗಳನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ. ರೈತರ ಬ್ಯಾಂಕ್‌ ಖಾತೆಗಳಿಗೆ ಸ೦ಬ೦ಧಿಸಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದ ಜಿಲ್ಲೆಯ 12,406 ರೈತರಿಗೆ ಪರಿಹಾರ ಜಮೆ ಆಗದಿರುವ ಬಗ್ಗೆ ಪಟ್ಟಿಯನ್ನು ಗ್ರಾಮವಾರು ವಿಂಗಡಿಸಿ ಕಳುಹಿಸಲಾಗಿದ್ದು, ಅಂತಹ ಖಾತೆಗಳನ್ನು ಸರಿಪಡಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ.
ಯಾವ ಬೆಳೆಗೆ ಎಷ್ಟು ಪರಿಹಾರ?

ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಗರಿಷ್ಠ 2 ಹೆಕ್ಟೇರ್ ಪ್ರದೇಶದ ಮಿತಿಗೊಳಪಟ್ಟು ಬೆಳೆ ನಷ್ಟ ಪರಿಹಾರ ನಿಗದಿ ಮಾಡಲಾಗಿದೆ.

• ಮಳೆಯಾಶ್ರಿತ ಬೆಳೆಗೆ - 8,500 ರೂ.

• ನೀರಾವರಿ ಪ್ರದೇಶದ ಬೆಳೆ – 17,000 ರೂ.

• ದೀರ್ಘಾವಧಿ (ತೋಟಗಾರಿಕೆ) ಬೆಳೆ – 22,500 .
ಬ್ಯಾಂಕ್ ಅಧಿಕಾರಿಗಳಿಗೆ ಆದೇಶ

ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾಯಿಸಲು ಅದೇಶಿಸಲಾಗಿದೆ. ಈಗಾಗಲೇ ರಾಜ್ಯ ಸರಕಾರ ಕಳೆದ ಜನವರಿಯಲ್ಲಿ ರೈತರಿಗೆ ಗರಿಷ್ಠ 2 ಸಾವಿರ ರೂ.ವರೆಗೆ ಮಧ್ಯಂತರ ಪರಿಹಾರ ಪಾವತಿಸಿದೆ. NDRF ಮಾರ್ಗಸೂಚಿ ಪ್ರಕಾರ ಮಳೆಯಾಶ್ರಿತ ಪ್ರದೇಶದಲ್ಲಿ ಬೆಳೆ ಬೆಳೆಯುವ ರೈತರಿಗೆ: ಎಕರೆಗೆ 8,500 ರೂ ಮತ್ತು ನೀರಾವರಿ ಬೆಳೆಗೆ 17,000 ರೂ, ಬಹುವಾರ್ಷಿಕ ಬೆ i 22,500 ರೂ ರಂತೆ ಎರಡು ಕಂತುಗಳಲ್ಲಿ ರೈತರಿಗೆ ನೇರ ನಗದು ವರ್ಗಾವಣೆಮೂಲಕ ಜಮಾ ಮಾಡಲಾಗಿದ್ದು ಈ ಹಣವನ್ನು ಯಾವುದೇ ಕಾರಣಕ್ಕೂ ಬ್ಯಾಂಕಿನವರು ಸಾಲಕ್ಕೆ ಜಮಾ ಮಾಡಿಕೊಳ್ಳುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದ್ದು ಬರ ಪರಿಹಾರದ ಸಂಪೂರ್ಣ ಹಣವನ್ನು ರೈತರಿಗೆ ನೀಡತಕ್ಕದ್ದು ಎಂದು ತಿಳಿಸಲಾಗಿದೆ.

ಈಗಾಗಲೇ ರೈತರ ಖಾತೆಗೆ ನೇರವಾಗಿ ಪರಿಹಾರ ಜಮಾ ಆಗಿದ್ದು, ಪರಿಹಾರ ಬಾರದಿರುವ, ಬ೦ದ ಪರಿಹಾರದಲ್ಲಿ ವ್ಯತ್ಯಾಸವಿದ್ದರೆ, ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿಪಡೆದುಕೊಳ್ಳಬಹುದಾಗಿದೆ. ಬೆಳೆ ನಷ್ಟ ಪರಿಹಾರಕ್ಕೆ ಸಂಬಂಧಿಸಿದಂತೆ ರೈತರಿಗೆ ಅಗತ್ಯ ಮಾಹಿತಿ ನೀಡಲು ಡಿಸಿ, ಎಸಿ ಮತ್ತು ತಹಶೀಲ್ದಾ‌ರ್ ಕಚೇರಿಗಳಲ್ಲಿ ಹೆಲ್ಸ್ ಡೆಸ್ಕ್‌ಗಳನ್ನು ತೆರೆಯಲು ಕೂಡ ರಾಜ್ಯ ಸರಕಾರದಿಂದ ನಿರ್ದೇಶನ ನೀಡಲಾಗಿದೆ.






Post a Comment

0Comments

Post a Comment (0)