ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶವನ್ನು ಮೇ ಎರಡನೇ ವಾರದಲ್ಲಿ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದ್ದು, ಇನ್ನೂ ಫಲಿತಾಂಶದ ದಿನಾಂಕ ನಿಗದಿಯಾಗಿಲ್ಲ.
ಮಾ. 25ರಿಂದ ಎ. 6ರ ವರೆಗೆ 2,750 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದವು. ಪರೀಕ್ಷೆ ಮುಗಿದ ಬೆನ್ನಲ್ಲೇ ಮೌಲ್ಯಮಾಪನ ಪ್ರಕ್ರಿಯೆ ನಡೆಸಲಾಗಿತ್ತು. ಎಲ್ಲ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ಅಂಕಗಳ ಕೂಡುವಿಕೆ ನಡೆಯುತ್ತಿದೆ. ಮೇ 7ರ ಒಳಗೆ ಎಲ್ಲ ಪ್ರಕ್ರಿಯೆಗಳೂ ಪೂರ್ಣಗೊಳ್ಳಲಿವೆ. ಮೇ 7ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮತದಾನ ಇರುವುದರಿಂದ ಅನಂತರ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.