ಬೆಳಗಾವಿ ತಾಲ್ಲೂಕಿನ ಸಾಂಬ್ರಾದಲ್ಲಿ ಶನಿವಾರ ಸಂಚಾರ ಸಮಸ್ಯೆ ಉಂಟಾಗಿರುವುದು
ಬೆಳಗಾವಿ: ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ನಡೆಯುತ್ತಿರುವ ಮಹಾಲಕ್ಷ್ಮಿ ದೇವಿ ಜಾತ್ರೆಗೆ ಶನಿವಾರ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸಿದ್ದರಿಂದ ರಾಯಚೂರು-ಬಾಚಿ ರಾಜ್ಯ ಹೆದ್ದಾರಿಯಲ್ಲಿ ಎರಡು ತಾಸಿಗೂ ಅಧಿಕ ಸಂಚಾರ ಸಮಸ್ಯೆ ಉಂಟಾಗಿತ್ತು.
ಹೆದ್ದಾರಿಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಈ ಮಾರ್ಗದ ಬಸ್‌ಗಳಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಮತ್ತು ಬೈಕ್ ಸವಾರರು ಪರದಾಡಿದರು.
ನ್ಯಾಯಾಧೀಶರೊಬ್ಬರ ಎಸ್ಕಾರ್ಟ್ ವಾಹನವೂ ಕೆಲಹೊತ್ತು ಇದರಲ್ಲೇ ಸಿಲುಕಿಕೊಂಡಿತು.