ಬೆಳಗಾವಿ:ಸಿಡಿಲು ಬಡಿದು ಇಬ್ಬರು ಸಾವು: ಐವರಿಗೆ ಗಾಯ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೆಳಗಾವಿ: ಜಿಲ್ಲೆಯಲ್ಲಿ ಗುಡುಗು-ಸಿಡಿಲು ಮಿಶ್ರಿತ ಧಾರಾಕಾರ ಮಳೆಯಿಂದ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಮೃತಪಟ್ಟು, ಐವರು ಗಾಯಗೊಂಡ ಘಟ‌ನೆ ನಡೆದಿದೆ.
ರಾಯಭಾಗ ಪಟ್ಟಣದ ಹೊರ ವಲಯದ ಜಮೀನಿನಲ್ಲಿ ಗುರುವಾರ ಕೃಷಿ ಕೆಲಸದಲ್ಲಿ ತೊಡಗಿದ್ದ ಶೋಭಾ ಕೃಷ್ಣಾ ಕುಲಗುಡೆ(43) ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಲ್ಲಪ್ಪ ಶಂಕರ ಮೇತ್ರಿ(43), ಭಾರತಿ ಕೆಂಪಣ್ಣ ಕಮತೆ(32), ಬಾಬುರಾವ ಅಶೋಕ ಚವ್ಹಾಣ(30) ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಾಯಭಾಗ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Post a Comment

0Comments

Post a Comment (0)