ಬೆಳಗಾವಿ: ನಗರದ ಶಹಾಪುರ ಭಾಗದಲ್ಲಿ ಮತದಾರರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಣ ಹಂಚುತ್ತಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಾಸಕ ಅಭಯ ಪಾಟೀಲ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಠಾಣೆ ಎದುರು ಶನಿವಾರ ರಾತ್ರಿ ಪ್ರತಿಭಟನೆ ನಡೆಸಿದ್ದಾರೆ.
ಶಹಾಪುರ ಠಾಣೆ ಎದುರು ಜಮಾಯಿಸಿದ ಬಿಜೆಪಿ ಶಾಸಕ ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಹಣ ಹಂಚುತ್ತಿದ್ದವರ ವಿರುದ್ಧ ಕೂಡಲೇ ದೂರಿ ದಾಖಲಿಸಬೇಕು ಎಂದು ಒತ್ತಾಯಿಸಿದರು.
ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಅಭಯ ಪಾಟೀಲ, ದೂರು ದಾಖಲಾಗುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಠಾಣೆಯಲ್ಲಿಯೇ ಠಿಕಾಣಿ ಹೂಡಿದ್ದಾರೆ. ರಾತ್ರಿ 11:40ರ ವರೆಗೂ ಪ್ರತಿಭಟನಾಕಾರರು ಠಾಣೆಯಲ್ಲಿಯೇ ಇದ್ದರು.