ಹುಬ್ಬಳ್ಳಿ ನಿವಾಸಿ ಕುಮಾರಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆಗ್ರಹ: ಜಗದೀಶ ಶೆಟ್ಟರ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
*ಮಾಧ್ಯಮ ಪ್ರಕಟಣೆಗಾಗಿ*

ಹುಬ್ಬಳ್ಳಿ ನಿವಾಸಿ ಕುಮಾರಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆಗ್ರಹ : ಜಗದೀಶ್ ಶೆಟ್ಟರ 

ಬೆಳಗಾವಿ: ಮೇ. 15
ಹುಬ್ಬಳ್ಳಿ ನಗರದ ವೀರಾಪುರ ಓಣಿಯ ನಿವಾಸಿ ಕುಮಾರಿ ಅಂಜಲಿ ಅಂಬಿಗೇರ ಕೊಲೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಅವರು ತಪ್ಪಿತಸ್ಥರಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ, ಅವರ ಕುಟುಂಬದ ದುಃಖದಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್ ಸರ್ಕಾರ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪದೇ ಪದೇ ವಿಫಲವಾಗುತ್ತಿದೆ‌. ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಕೂಡಲೇ ಪೊಲೀಸ್ ಇಲಾಖೆ ಸೂಕ್ತ ನಿರ್ದೇಶನ ನೀಡುವ ಮೂಲಕ ಕೊಲೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು.

ಅಲ್ಲದೇ, ಇಂತಹ ಘಟನೆಗಳು ಪುನರಾವರ್ತಿತ ಆಗುತ್ತಿರುವ ಹಿನ್ನೆಲೆಯಲ್ಲಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಾಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Post a Comment

0Comments

Post a Comment (0)