ಶ್ರೀ ರೇವಣಸಿದ್ದೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷ ಶಾಲಾ ಪ್ರಾರಂಭೋತ್ಸವ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ನೇಸರಗಿ-ಮಲ್ಲಾಪೂರ ಗ್ರಾಮದ ಶ್ರೀ ರೇವಣಸಿದ್ದೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷ ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಪರಮಪೂಜ್ಯ ಶ್ರೀ ಚಿದಾನಂದ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ವಿದ್ಯಾರ್ಥಿಗಳನ್ನು ತುಂಬುಹೃದಯದಿಂದ ಸ್ವಾಗತಿಸಲಾಯಿತು. 

ಇದೇ ಸಂದರ್ಭದಲ್ಲಿ 2023-24 ಸಾಲಿಗೆ *ಇಂಟರ್ ನ್ಯಾಷನಲ್ ಹಾಟ್ಸ್ ಓಲಂಪಿಯಾಡ್* ಸ್ಪರ್ಧಾಪರೀಕ್ಷೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿನಿ ಕುಮಾರಿ *ವಿಜಯಲಕ್ಷ್ಮೀ ವಾಸನಗೌಡ ಪಾಟೀಲ* 1500 ವಿದ್ಯಾರ್ಥಿಗಳಲ್ಲಿ 15 ನೇ ಸ್ಥಾನ ಪಡೆದು ಉತ್ತೀರ್ಣರಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದುಕೊಟ್ಟ ವಿದ್ಯಾರ್ಥಿಯನ್ನು ಗೌರವಿಸಿ ಸನ್ಮಾನಿಸಲಾಯಿತು.

Post a Comment

0Comments

Post a Comment (0)