ನವದೆಹಲಿ: ನರೇಂದ್ರ ಮೋದಿ ಅವರ 3ನೇ ಅಧಿಕಾ ರಾವಧಿಯಲ್ಲಿ ಕರ್ನಾಟಕದ ಮಾಜಿ ಸಿಎಂ ಹಾಗೂ ಮಂಡ್ಯ ಸಂಸದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಂಪುಟ ಸಚಿವ ಸ್ಥಾನ ದೊರೆತಿದೆ. ಈ ಮೂಲಕ 25 ವರ್ಷಗಳ ಬಳಿಕ ಜೆಡಿಎಸ್ ನಾಯಕರೊಬ್ಬರಿಗೆ ಕೇಂದ್ರ ಸಚಿವ ಸ್ಥಾನ ಒಲಿದಂತಾಗಿದೆ.
ಪ್ರಸಕ್ತ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿತ್ತು. 3 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ 2ರಲ್ಲಿ ಜಯಸಾಧಿಸಿದೆ. ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ಲಭಿಸಿದೆ. ಜೆಡಿಎಸ್ ಎನ್‌ಡಿಎ ಒಕ್ಕೂಟದ ಪ್ರಮುಖ ಮಿತ್ರಪಕ್ಷವಾಗಿದ್ದು, ಸಚಿವ ಸ್ಥಾನ ದೊರೆಯುವ ಮೂಲಕ ಬರೊಬ್ಬರಿ 25 ವರ್ಷಗಳ ನಂತರ ಜೆಡಿಎಸ್‌ಗೆ ಈ ಭಾಗ್ಯ ಒಲಿದಿದೆ.