ಕರ್ನಾಟಕ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಲವು ಕಡೆ ಉತ್ತಮ ಮಳೆಯಾಗುತ್ತಿದೆ. ಅದರಲ್ಲೂ ಬೆಂಗಳೂರಲ್ಲಂತೂ ದಿನ ಬಿಟ್ಟು ದಿನ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ವರದಿ ಪ್ರಕಾರ ಜೂನ್ 11ರವರೆಗೂ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಜೊತೆಗೆ ಬೆಂಗಳೂರಿನಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಪ್ರತಿಕ್ರಿಯಿಸಿದ್ದು, ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಹೆಚ್ಚಿನ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಕಲಬುರಗಿ, ಉಡುಪಿಯಲ್ಲಿ ಅತ್ಯಂತ ಭಾರಿ ಮಳೆ ಸಾಧ್ಯತೆ ಇದ್ದು, ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಗದಗ, ಧಾರವಾಡ, ಹಾವೇರಿ, ವಿಜಾಪುರ, ಬಾಗಲಕೋಟೆ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಇಂದಿನಿಂದ 11ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ರಾಯಚೂರು, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.