ಪ್ರಧಾನಿ ಮೋದಿ ಅವರು ಈ ಇಲಾಖೆಯನ್ನು ಮತ್ತಷ್ಟು ಬಲಪಡಿಸಿ ಮುನ್ನಡೆಸುವ ಹೊಣೆ ವಹಿಸಿದ್ದಾರೆ. ಅಂತೆಯೇ ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ಅವರ ನಿರೀಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಪ್ರಲ್ಹಾದ ಜೋಶಿ ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಹೊಸ ಮತ್ತು ನವೀಕರಿಸಬಹುದಾದ ಇಂಧನ ವಲಯ ಭಾರತದ ಇಂಧನ ಭದ್ರತೆಗೆ ಈಗಾಗಲೇ ಕೊಡುಗೆ ನೀಡುತ್ತಿದೆ. ಈ ದಿಕ್ಕಿನಲ್ಲಿ ನಾವು ಮತ್ತಷ್ಟು ಪರಿಣಾಮಕಾರಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.
ತಮ್ಮ ಹಿಂದಿನ ಅವಧಿಯಲ್ಲಿ ಕಲ್ಲಿದ್ದಲು ಉತ್ಪಾದನೆ ಹೆಚ್ಚಿಸುವ ಮೂಲಕ ಇಂಧನ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದೇನೆ. ಅಂತೆಯೇ ಭವಿಷ್ಯದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರವನ್ನು ಸಬಲಗೊಳಿಸಿ ಇಂಧನದಲ್ಲಿ ಭಾರತ ಸ್ವಾವಲಂಬಿಯಾಗಿ ರೂಪುಗೊಳ್ಳಲು ಪ್ರಯತ್ನಿಸುವುದಾಗಿ ತಿಳಿಸಿದರು.
ಇಲಾಖೆಯಲ್ಲಿ ಅನುಭವಿ ಹಾಗೂ ಹಿರಿಯ ಅಧಿಕಾರಿಗಳಿದ್ದು, ಅವರೆಲ್ಲರ ಸಹಕಾರದಲ್ಲಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಮತ್ತಷ್ಟು ಹೊಸ ಆಯಾಮ ನೀಡಲಾಗುತ್ತದೆ ಎಂದು ತಿಳಿಸಿದರು