ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ : ಜಗದೀಶ ಶೆಟ್ಟರ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಕಿತ್ತೂರು ಕ್ರಾಂತಿ ವಾಹಿನಿ 

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ : ಜಗದೀಶ ಶೆಟ್ಟರ

ಬೆಳಗಾವಿ : ನೂತನ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ವಿಮಾನ ನಿಲ್ದಾಣದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆದರು. 

ಬೆಳಗಾವಿ ವಿಮಾನಯಾನ ಪ್ರಾಧಿಕಾರದ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. 

322 ಕೋಟಿ ರೂಪಾಯಿ ಅನುದಾನದ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಡೊಮೆಸ್ಟಿಕ್ ಟರ್ಮಿನಲ್ - T2 ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಕಾರ್ಯಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. 

ಈ ಸಂದರ್ಭದಲ್ಲಿ ಏರ್ಪೋರ್ಟ್ ಡೈರೆಕ್ಟರ್ ಆದ ಎಸ್. ತ್ಯಾಗರಾಜನ್, ಡಿಜಿಎಂ ಪಿ.ಎಸ್ ದೇಸಾಯಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Post a Comment

0Comments

Post a Comment (0)