ಜೂನ್ ಆರಂಭದಲ್ಲಿ ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದ್ದು, ಇದೀಗ ಮಳೆರಾಯ ಮೂರನೇ ವಾರ ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಮುನಿಸಿಕೊಂಡಿರುವ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ ಮುಂದುವರೆದಿದೆ. ಮತ್ತೊಂದೆಡೆ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ವರುಣ ಆರ್ಭಟ ಮುಂದುವರೆಸಿದ್ದಾನೆ.
ಹಾಗೆಯೇ ಇನ್ನೂ ಕಲವೇ ಕ್ಷಣಗಳಲ್ಲಿ ಈ ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವು ಕೊಟ್ಟು ಮಳೆಯಾಗುತ್ತಿದೆ. ಆದರೆ ಜೂನ್ ಮೊದಲ ವಾರಕ್ಕೆ ಹೋಲಿಕೆ ಮಾಡಿದರೆ, ನಗರದಲ್ಲಿ ಇದೀಗ ಮಳೆರಾಯನ ಆರ್ಭಟ ಕಡಿಮೆಯಾಗಿದೆ. ಆದರೆ ಇಂದು (ಜೂನ್ 23) ಇನ್ನು ಕೆಲವೇ ಕ್ಷಣಗಳಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.
ಈಗಾಗಲೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ. ಇನ್ನು ಇಂದು ಇನ್ನೂ ಕೆಲವೇ ಕ್ಷಣಗಳಲ್ಲಿ ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ, ದಾವಣಗೆರೆ, ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.
ಮತ್ತೊಂದೆಡೆ ನೋಡುವುದಾದೆ, ಕಳೆದ ಬಾರಿ ಮುಂಗಾರು ಕೈಕೊಟ್ಟ ಹಿನ್ನೆಲೆ ಬಹುತೇಕ ಕೆರೆ-ಕಟ್ಟೆಗಳು, ಹಲವು ಪ್ರಮುಖ ಜಲಾಶಯಗಳು ಬತ್ತಿಹೋಗುವ ಹಂತವನ್ನು ತಲುಪಿದ್ದವು. ಆದರೆ ಈ ಬಾರಿ ಮೇ ತಿಂಗಳ ಮಧ್ಯದಲ್ಲೇ ಮಳೆರಾಯ ಆರ್ಭಟಿಸಿದ್ದರಿಂದ ಅನೇಕ ಜಿಲ್ಲೆಗಳಲ್ಲಿ ಜಲಮೂಲಗಳಿಗೆ ಜೀವಕಳೆ ಬಂದಂತಾಗಿತ್ತು
ಹಾಗೆಯೇ ಜೂನ್ ಆರಂಭದಿಂದ ಮುಂಗಾರು ಮಳೆ ಚುರುಕು ಪಡದಿದ್ದು, ಬಹುತೇಕ ಜಲಾಶಯಗಳ ಒಳಹರಿವು ಹೆಚ್ಚಾಗತೊಡಗಿತು. ಆದರೆ ಇದೀಗ ಜೂನ್ ಮೂರನೇ ವಾರದಲ್ಲಿ ಮಾತ್ರ ಮಳೆ ತಗ್ಗಿದ್ದು, ಮತ್ತೆ ಅದೇ ಆಡಿದ್ದೇ ಆಟ ಎಂಬಂತೆ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ ಮುಂದುವರೆದಿದೆ. ಇದರಿಂದ ಇದೀಗ ಬಿತ್ತನೆ ಮಾಡಿದ ರೈತರಲ್ಲಿ ಆತಂಕ ಶುರುವಾಗಿದೆ.
ಇನ್ನು ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮತ್ತೆ ಮುಂಗಾರು ಚುರುಕು ಪಡೆದರೆ, ಜಲಮೂಲಗಳಿಗೆ ನೀರು ಬುರುವುದಲ್ಲದೆ, ಕೃಷಿ ಬೆಳೆಗಳು ಸಹ ಉತ್ತಮವಾಗಿ ಬರಲಿದೆ. ಇದು ನಿಜವಾದರೆ, ರೈತರ ಮುಖದಲ್ಲಿ ಕಳೆದುಹೋಗಿದ್ದ ಮಂದಹಾಸ ಮತ್ತೆ ಮೂಡುವುದರಲ್ಲಿ ಯಾವುದೇ ಅನುಮಾನವಿಲ್ಲ.