ರಾಜ್ಯದ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ, ಹವಾಮಾನ ಇಲಾಖೆ ಮುನ್ಸೂಚನೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಈಗಾಗಲೇ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ರಾಜ್ಯದ 13 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದ್ದು, ದಕ್ಷಿಣ ಕನ್ನಡ, ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಳಗಾವಿ, ವಿಜಯನಗರ, ತುಮಕೂರು, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗುವ ಮುನ್ಸೂಚನೆ ಇದೆ.
ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತೆ ನಾಳೆ ಮತ್ತು ನಾಡಿದ್ದು (ಜು.6, 7) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ವರುಣಾರ್ಭಟ ಹಿನ್ನೆಲೆಯಲ್ಲಿ ದ.ಕನ್ನಡ, ಉ.ಕನ್ನಡ, ಉಡುಪಿಯಲ್ಲಿ ಜು.8 ರಿಂದ 10ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ಆರೇಂಜ್ ಅಲರ್ಟ್ ಇದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕುಮಟಾ, ಹೊನ್ನಾವರ, ಭಟ್ಕಳ, ಕಾರವಾರ, ಅಂಕೋಲಾ ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Post a Comment

0Comments

Post a Comment (0)