ಮಳೆ... ಮಳೆ...ಮಳೆ...!!! ಮತ್ತಷ್ಟು ಜೋರಾಗುತ್ತಿದೆ, ಭರ್ಜರಿ ಮಳೆ ಬೀಳುತ್ತಿರುವ ಕಾರಣಕ್ಕೆ ಈಗಾಗಲೇ ಕರ್ನಾಟಕ ಪೂರ್ತಿ ತೊಯ್ದು ಹೋಗಿದೆ. ಹೀಗಿದ್ದರೂ ಮಳೆರಾಯ ಮಾತ್ರ ಸೈಲೆಂಟ್ ಆಗುತ್ತಿಲ್ಲ. ಈಗ ನೋಡಿದ್ರೆ ಮತ್ತೆ ಮುಂದಿನ 24 ಗಂಟೆ ಕಾಲ ಮತ್ತಷ್ಟು ಜೋರಾಗಿ ಮಳೆ ಬೀಳಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಹಾಗಾದ್ರೆ ಹವಾಮಾನ ಇಲಾಖೆ ಹೇಳಿರುವ ಪ್ರಕಾರ ಯಾವೆಲ್ಲಾ ಜಿಲ್ಲೆ & ತಾಲೂಕುಗಳಿಗೆ ಮುಂದಿನ 24 ಗಂಟೆ ಭರ್ಜರಿ ಮಳೆ ಬರಲಿದೆ ಗೊತ್ತಾ? ಮುಂದೆ ಓದಿ.
ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ ಹೀಗಾಗಿ ಎಲ್ಲೆಲ್ಲೂ ಭಾರಿ ಮಳೆ ಬೀಳುತ್ತಿದೆ. ಕರಾವಳಿ & ಮಲೆನಾಡು ಕರ್ನಾಟಕದಲ್ಲಿ ಮಾತ್ರ ಅಲ್ಲ, ಉತ್ತರ ಕರ್ನಾಟಕ & ದಕ್ಷಿಣ ಕರ್ನಾಟಕದ ಭಾಗದಲ್ಲಿ ಕೂಡ ಮಳೆರಾಯ ಅಬ್ಬರಿಸಿದ್ದು ಎಲ್ಲೆಲ್ಲೂ ಬರೀ ನೀರೆ ಕಾಣ್ತಿದೆ ಪರಿಸ್ಥಿತಿ ಹೀಗಿದ್ದಾಗಲೇ ಮುಂದಿನ 24 ಗಂಟೆ ಕಾಲ ಮತ್ತಷ್ಟು ರಣಭೀಕರ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಲಾಗಿದೆ. ಹೀಗೆ ಭಾರಿ ಮಳೆ ಬೀಳುವ ಜಿಲ್ಲೆಗಳು ಯಾವುವು ಗೊತ್ತಾ? ಸಂಪೂರ್ಣ ಮಾಹಿತಿ ಇಲ್ಲಿದೆ ಮುಂದೆ ಓದಿ.
ಬೆಂಗಳೂರಲ್ಲಿ ಸೂರ್ಯ ಕಾಣಲ್ಲ!
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳಲಿದೆ ಎಂಬ ಮುನ್ಸೂಚನೆ ನೀಡಲಾಗಿದೆ. ಇದರ ಜತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ದಾವಣಗೆರೆ, ಮೈಸೂರು & ಮಂಡ್ಯ ಸೇರಿ ಚಿತ್ರದುರ್ಗ, ತುಮಕೂರು, ಕಲಬುರಗಿ, ಬೀದರ್, ಕೋಲಾರದಲ್ಲೂ ಮಳೆ ಅಬ್ಬರ ಗ್ಯಾರಂಟಿ ಆಗಿದೆ. ಅದರಲ್ಲೂ ಬೆಂಗಳೂರಲ್ಲಿ ಇನ್ನೂ 1 ವಾರಗಳ ಕಾಲ ಸೂರ್ಯ ಕಾಣುವುದೇ ಅನುಮಾನ ಎನ್ನಲಾಗುತ್ತಿದೆ. ಯಾಕಂದ್ರೆ ಮುಂದಿನ 1 ವಾರ ಕಾಲ, ಇದೇ ರೀತಿ ಮಳೆ ಅಬ್ಬರವು ಇರಲಿದೆ ಎನ್ನಲಾಗಿದೆ.
ಕರ್ನಾಟಕ ಪೂರ್ತಿ ಭಾರಿ ಮಳೆ
ರಾಜಧಾನಿ ಬೆಂಗಳೂರು ಸೇರಿ ವಿಜಯಪುರ & ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ & ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲೂ ಮುಂಗಾರು ಮಳೆ ಅಬ್ಬರಿಸಲಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು, ಹಾಸನ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭರ್ಜರಿ ಮಳೆ ಆಗಲಿದೆಯಂತೆ. ಹೀಗಾಗಿ ಎಲ್ಲೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಮಳೆಯಿಂದ ರಕ್ಷಣೆ ಪಡೆಯಲು ಅತ್ಯಗತ್ಯ ಮುಚ್ಚರಿಕೆ ಸಲಹೆಗಳನ್ನು ಪಾಲಿಸುವಂತೆ, ಸೂಚನೆ ನೀಡಲಾಗಿದೆ.