ಮೊಹರಂ ಹಬ್ಬದ ಮಹತ್ವ, ಆಚರಣೆ ಮತ್ತು ಹಿನ್ನೆಲೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಮೊಹರಂ ಹಬ್ಬದ ಮಹತ್ವ, ಆಚರಣೆ ಮತ್ತು ಹಿನ್ನೆಲೆ
ಮೊಹರಂ ಎಂದರೆ ಮಹಮದಿಯರ ಮೊದಲ ತಿಂಗಳು. ಇಲ್ಲಿಂದ ಇಸ್ಲಾಂ ವರ್ಷ ಆರಂಭವಾಗುತ್ತದೆ. ಈ ಹಬ್ಬಕ್ಕೆ ಚಾರಿತ್ರಿಕ ಮತ್ತು ಧಾರ್ಮಿಕ ಹಿನ್ನೆಲೆಯೂ ಇದೆ. ಇಸ್ಲಾಂ ಸಂಸ್ಥಾಪಕರಾದ ಮಹಮ್ಮದ್ ಪೈಗಂಬರ್ ಕೊನೆಯ ಪುತ್ರಿ ಫಾತಿಮಾ ಬೇಬಿ ಪತಿ ಹಜರತ್ ಆಲಿ ನಾಲ್ಕನೇ ಖಲೀಫರಾಗಿದ್ದರು.
ಇದು ಹಿಂದೂ ಮುಸ್ಲಿಮರ ಭಾವೈಕ್ಯತೆಯ ಹಬ್ಬಗಳಲ್ಲಿ ಪ್ರಮುಖವಾದದ್ದು ಮೊಹರಂ. ಯಾವುದೇ ತಾರತಮ್ಯ ಇಲ್ಲದಂತೆ ಈ ಹಬ್ಬದಲ್ಲಿ ಹಿಂದೂಗಳು ಪಾಲ್ಗೊಳ್ಳುತ್ತಾರೆ. ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಮೊಹರಂ ಹಬ್ಬವನ್ನು ಬಾಬಯ್ಯ ಹಬ್ಬ ಎಂದು ಕರೆಯುತ್ತಾರೆ.
ಮೊಹರಂ ಎಂದರೆ ಮಹಮದಿಯರ ಮೊದಲ ತಿಂಗಳು. ಇಲ್ಲಿಂದ ಇಸ್ಲಾಂ ವರ್ಷ ಆರಂಭವಾಗುತ್ತದೆ. ಈ ಹಬ್ಬಕ್ಕೆ ಚಾರಿತ್ರಿಕ ಮತ್ತು ಧಾರ್ಮಿಕ ಹಿನ್ನೆಲೆಯೂ ಇದೆ. ಇಸ್ಲಾಂ ಸಂಸ್ಥಾಪಕರಾದ ಮಹಮ್ಮದ್ ಪೈಗಂಬರ್ ಕೊನೆಯ ಪುತ್ರಿ ಫಾತಿಮಾ ಬೇಬಿ ಪತಿ ಹಜರತ್ ಆಲಿ ನಾಲ್ಕನೇ ಖಲೀಫರಾಗಿದ್ದರು. ಆಗ ದಮಾಸ್ಕಸ್‌ನಲ್ಲಿ ಮುಅವಿಯ ಎಂಬ ಸರ್ದಾರನು ತಾನೇ ಖಲೀಫನೆಂದು ಸಾರಿಕೊಂಡು ಜನರ ಮೇಲೆ ಧರ್ಮ ಪ್ರಭುತ್ವ ಹೇರಿದನು.
ಹಜರತ್ ಅಲಿ ಬಳಿಕ ಅವರ ಮಗ ಪೈಗಂಬರರ ಎರಡನೇ ಮೊಮ್ಮಗ ಇಮಾಮ್ ಹುಸೇನ್ ಖಲೀಫ್ ಪಟ್ಟ ಅಲಂಕರಿಸಬೇಕಾಗಿತ್ತು. ಆದರೆ ಮುಅವಿಯಾನ್ ಮಗ ಯಜೀದನು ತಾನೇ ಖಲೀಫನೆಂದು ಘೋಷಿಸಿಕೊಂಡನು. ಈ ಅನ್ಯಾಯವನ್ನು ಇಮಾನ್ ಹುಸೇನರು ಪ್ರತಿಭಟಿಸಿದರು.
ಸತ್ಯ ನ್ಯಾಯವನ್ನು ಕಾಪಾಡಲು ಇಮಾಮ್ ಹುಸೇನರು 72 ಅನುಯಾಯಿಗಳೊಡನೆ ಯುದ್ಧ ಸಾರಿದರು. ಮೊಹರಂ ತಿಂಗಳ ಹತ್ತನೇ ದಿನ ಕರುಬಲಾ ಎಂಬ ಮರುಭೂಮಿಯಲ್ಲಿ ನಡೆದ ತುಮುಲ ಯುದ್ಧದಲ್ಲಿ ಇಮಾಮ್ ಹುಸೇನ್ ಹುತಾತ್ಮರಾದರು. ಶಾಂತಿ ಮತ್ತು ಧರ್ಮಕ್ಕಾಗಿ ತಮ್ಮನ್ನೆ ಸಮರ್ಪಿಸಿಕೊಂಡು ಹಜರತ್ ಹಸನ್ ಮತ್ತು ಹುಸೇನರ ಪುಣ್ಯ ಸ್ಮರಣೆಯ ನಿಮಿತ್ತ ಈ ಹಬ್ಬ ನಡೆಯುತ್ತದೆ.
ಹತ್ತು ದಿನಗಳವರೆಗೆ ನಡೆಯುವ ಈ ಹಬ್ಬದ ಆಚರಣೆಯು ಹಿಂದೂ ಮುಸ್ಲಿಂ ಬೇಧವಿಲ್ಲದೆ ಎಲ್ಲರೂ ಭಾಗವಹಿಸುತ್ತಾರೆ. ಈ ಹಬ್ಬದಲ್ಲಿ ಬರುವ ಹೆಜ್ಜೆ ಕುಣಿತ, ಮುಳ್ತಾ ಹೆಜ್ಜೆ ಕುಣಿತ, ಮಟಕಿ ಹೆಜ್ಜೆ ಕುಣಿತ, ಮರಗಾಲು ಕುಣಿತ ಮುಂತಾದ ಪ್ರಕಾರದಲ್ಲಿ ಕುಣಿಯುತ್ತಾರೆ. ಇದನ್ನು ಜಾನಪದ ಕಲೆಗಳಲ್ಲಿ ಒಂದಾಗಿ ಪರಿಗಣಿಸಲಾಗಿದೆ. ಹಳ್ಳಿಗಳಲ್ಲಿ ಈ ಕುಣಿತಕ್ಕೆ ಅಲಾಯಿ ಹೆಜ್ಜೆ ಕುಣಿತ ಎಂದು ಕರೆಯಲಾಗುತ್ತದೆ.
ಮೊಹರಂ ಹಬ್ಬದ ಮಹತ್ವ
ಈ ದಿನವು ಪ್ರವಾದಿ ಮೊಹಮ್ಮದ್‌ ರ ಮೊಮ್ಮಗ ಹುಸೇನ್ ಇಬ್ನ ಅಲಿ ಅವರ ಮರಣವನ್ನು ಸ್ಮರಿಸುವ ದಿನವಾಗಿದೆ. ಮೊಹರಂ ಮುಸ್ಲಿಂ ಉಮ್ಮಾಗೆ ನೆನಪಿನ ಸಮಯವೂ ಆಗಿದೆ. ಇಸ್ಲಾಮಿಕ್ ಕ್ಯಾಲೆಂಡರ್‌ನ 61 ನೇ ವರ್ಷದಲ್ಲಿ 10 ನೇ ಮೊಹರಂ (ಅಶುರಾ ದಿನ) ಕರ್ಬಲಾ ಯುದ್ಧ ನಡೆಯಿತು ಮತ್ತು ಪ್ರವಾದಿಯ ಪ್ರೀತಿಯ ಮೊಮ್ಮಗ ಇಮಾಮ್ ಹುಸೇನ್‌ರನ್ನು ಕ್ರೂರವಾಗಿ ಹತ್ಯೆ ಮಾಡಲಾಯಿತು.

Post a Comment

0Comments

Post a Comment (0)