ಬೆಳಗಾವಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮಹಮ್ಮದ್ ರೋಷನ್ ಅಧಿಕಾರ ಸ್ವೀಕಾರ...!

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0

ಬೆಳಗಾವಿ: ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮಹಮ್ಮದ್ ರೋಶನ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು. 
ನಿಕಟ ಪೂರ್ವ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ಅಧಿಕಾರವನ್ನು ಹಸ್ತಾಂತರಿಸಿದರು. 
2015ನೇ ಬ್ಯಾಚ್ನ ಐ ಟಿ ಎಸ್ ಅಧಿಕಾರಿಯಾಗಿರುವ ಮಹಮ್ಮದ್ ರೋಷನ್ ಅವರು ಈ ಮುಂಚೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿ ಟೆಕ್ ಹಾಗೂ ಎಂಬಿಎ ಫೈನಾನ್ಸ್ ಎಂ ಎ ಪಬ್ಲಿಕ್ ಪಾಲಿಸಿ ಪದವೀಧರರಾದ ಮತ್ತು ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಆಡಳಿತದಲ್ಲಿ ಚುರುಕು ತಂದಿದ್ದ ನಿತೀಶ್ ಪಾಟೀಲ್ ಅವರು ಸಣ್ಣ ಮತ್ತು ಮಧ್ಯಮ ಉದ್ಯಮಗಳ ಇಲಾಖೆ ನಿರ್ದೇಶಕರಾಗಿ ಸೇವೆ ಸಲ್ಲಿಸಲು ವರ್ಗಾವಣೆ ಗೊಂಡಿದ್ದಾರೆ.

Post a Comment

0Comments

Post a Comment (0)