ಗೃಹಲಕ್ಷ್ಮಿ ಯೋಜನೆ ಪಡೆಯಲು ಆದಾಯ ತೆರಿಗೆ ಪಾವತಿದಾರರ ಪಡಿತರ ಚೀಟಿಯವರು ಅರ್ಹರಲ್ಲ. ಅಂತಹ 1.78 ಲಕ್ಷ ಫಲಾನುಭವಿಗಳನ್ನು ಪತ್ತೆ ಮಾಡಲಾಗಿದೆ ಎಂದು ಸಚಿವೆ ಲಕ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಮಾರ್ಚ್ ನಲ್ಲಿ ಜಾರಿಗೆ ಬಂದಿತ್ತು.
ಬಳಿಕ ಹೊಸದಾಗಿ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರಲ್ಲೀಗ ಈ ಅರ್ಜಿಗಳನ್ನೂ ಪರಿಗಣಿಸಲು ಸರಕಾರ ನಿರ್ಧರಿಸಿದ್ದಾರೆ. ಆದರೆ ಆದಾಯ ತೆರಿಗೆ ಪಾವತಿದಾರರ ಮನೆಯ ಯಜಮಾನಿಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲಾಗಿದೆ ಎಂದಿದ್ದಾರೆ.
ಆದಾಯ ತೆರಿಗೆ ಪಾವತಿಸದ ಕುರಿತು ದೃಢೀಕರಣ ಪತ್ರ ತರಲು ಕೇಳಿದ್ದೆವು. 1.78 ಲಕ್ಷ ಮಂದಿ ಪೈಕಿ 6 ಸಾವಿರ ಮಂದಿ ದೃಢೀಕರಣ ಪತ್ರ ಸಲ್ಲಿಸಿದ್ದಾರೆ. ಆದರೆ ಈ ವೇಳೆ ಆದಾಯ ತೆರಿಗೆಯ ಧೃಢೀಕರಣ ನೀಡದ ಅಷ್ಡೂ ಮಂದಿಯನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ. ಇನ್ನುಳಿದ ಫಲಾನುಭವಿಗಳು ಯಾವುದೇ ಚಿಂತೆ ಮಾಡಬೇಕಿಲ್ಲ. ಅವರಿಗೆಲ್ಲಾ ಗೃಹಲಕ್ಷ್ಮೀ ಯೋಜನೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ ,ಲೋಕಸಭಾ ಚುನಾವಣೆ ನೀತಿ ಸಂಹಿತೆಯ ವೇಳೆ ಸಲ್ಲಿಸಲಾದ ಅರ್ಜಿಗಳನ್ನು ಕೂಡ ಪರಿಗಣಿಸಿ ಅವರಿಗೂ ಗೃಹಲಕ್ಷ್ಮೀ ದೊರೆಯಲಿದೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.