ಉಡುಪಿ:ಸಾಮೂಹಿಕ ಅತ್ಯಾಚಾರದ ಆರೋಪ ಪ್ರತಿಭಟನೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಉಡುಪಿ:ಸಾಮೂಹಿಕ ಅತ್ಯಾಚಾರದ ಆರೋಪ ಪ್ರತಿಭಟನೆ...
ಉಡುಪಿ: ಜಿಲ್ಲೆಯ ಕಾರ್ಕಳದ (Karkala) ನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಯುವತಿ ಮೇಲಿನ ಸಾಮೂಹಿಕ ಬಲವಂತ ಕೃತ್ಯ ಪ್ರಕರಣಕ್ಕೆ ಸಂಬಂಧಿಸಿಂತೆ ಪೊಲೀಸರು ಈಗಾಗಲೇ ಇಬ್ಬರನ್ನು ಬಂಧಿಸಿದ್ದಾರೆ. ಸಂತ್ರಸ್ಥ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಕಾರ್ಕಳದ ಕುಕ್ಕುಂದೂರು ಗ್ರಾಮದ ಅಯ್ಯಪ್ಪ ನಗರ ಎಂಬಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಯುವತಿಗೆ ಅಮಲು ಬರಿಸುವ ಪಾನೀಯ ಬೆರೆಸಿ ಅತ್ಯಾಚಾರ ಎಸಗಿದ್ದಾರೆ ಎಂದು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಶನಿವಾರ (ಆ.24) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಈ ಕುರಿತು ಹೇಳಿಕೆ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯ ಎಸಗಿದ ಪ್ರಮುಖ ಆರೋಪಿ ಅಲ್ತಾಫ್‌ ಮತ್ತು ಸಹಾಯ ಮಾಡಿದ್ದ ಸವೇರಾ ರಿಚರ್ಡ್‌ ಕಾರ್ಡೋಜಾ ಎಂಬಾತನನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

Post a Comment

0Comments

Post a Comment (0)