ಬೆಂಗಳೂರು: ಹರ್ ಘರ್ ತಿರಂಗಾ (ಮನೆ ಮನೆಯಲ್ಲೂ ತ್ರಿವರ್ಣ ಧ್ವಜ) ಅಭಿಯಾನವನ್ನು ದೇಶದ ಜನರು ಸ್ಮರಣೀಯ ಅಂದೋಲನವನ್ನಾಗಿ ರೂಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ.
ಅಲ್ಲದೇ ಸಾಮಾಜಿಕ ಜಾಲತಾಣಗಳ ಡಿಪಿ ಇಮೇಜ್‌ಗಳನ್ನು ತಿರಂಗಾ ಧ್ವಜವಾಗಿ ಇಡಬೇಕು ಎಂದು ಅವರು ಹೇಳಿದ್ದಾರೆ.
ಈ ಕುರಿತು ಅವರು ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಿ ತಮ್ಮ ಪ್ರೊಫೈಲ್ ಪಿಕ್ಚರ್ ಅನ್ನು ತಿರಂಗಾವಾಗಿ ಬದಲಾಯಿಸಿದ್ದಾರೆ.
ಅಲ್ಲದೇ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ದೇಶವಾಸಿಗಳು ಸೆಲ್ಫಿ ತೆಗೆದುಕೊಳ್ಳುವ ಮೂಲಕ ವ್ಯಾಪಕವಾಗಿ ನಡೆಸಬೇಕು ಎಂದು ಕರೆ ನೀಡಿದ್ದಾರೆ.