ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಭರವಸೆ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.
ಒಂದು ವೇಳೆ ಮುಂದಿನ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾದರೆ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಇಳಿಕೆ ಮಾಡುವ ಸಾಧ್ಯತೆ ಇದ್ದಿರುವುದಾಗಿ ಜೈನ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಸರ್ಕಾರ ಕೂಡಾ ಪೆಟ್ರೋಲ್, ಡೀಸೆಲ್ ಮೇಲಿನ ವಿಂಡ್ ಫಾಲ್ (Windfall) ತೆರಿಗೆಯನ್ನು ತೆಗೆದುಹಾಕುವ ಬಗ್ಗೆ ಚಿಂತನೆ ನಡೆಸುತ್ತಿದ್ದು, ಈ ವಿಚಾರದಲ್ಲಿ ತೈಲ ಸಚಿವಾಲಯ, ಹಣಕಾಸು ಸಚಿವಾಲಯದ ಜತೆ ಮಾತುಕತೆ ನಡೆಸಲಿದೆ ಎಂದು ಜೈನ್ ತಿಳಿಸಿದ್ದಾರೆ.