ನವದೆಹಲಿ:ಇನ್ನೆರಡು ದಿನಗಳಲ್ಲಿ ರಾಜೀನಾಮೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಅಚ್ಚರಿಯ ಘೋಷಣೆ ಮಾಡಿದ್ದಾರೆ ಅವರ ಸಂಭಾವ್ಯ ಉತ್ತರಾಧಿಕಾರಿಯಾಗಿ ಹೆಸರನ್ನು ಉಲ್ಲೇಖ ಮಾಡಿದ್ದಾರೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆಯಾಗಿದ್ದಾರೆ.
ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಕೇಜ್ರಿವಾಲ್ ರಾಜೀನಾಮೆ ನೀಡಲು ತೀರ್ಮಾನ ಮಾಡಿದ್ದು, ಇದೀಗ ಸಿಎಂ ಗಾದಿಗೆ ನೂತನ ಹೆಸರನ್ನು ತಿಳಿಸಿದ್ದಾರೆ. ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಸಂಬಂಧ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ಕೇಜ್ರಿವಾಲ್ ಅವರು ತಿಹಾರ್ ಜೈಲು ಪಾಲಾಗಿದ್ದರು. ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಬಳಿಕ ಕೇಜ್ರಿವಾಲ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದರು ಅದಂರಂಥೆ ಈಗ ನವದೆಹಲಿಗೆ ಹೊಸ ಅನ್ನು ತಿಳಿಸಿದ್ದಾರೆ.