ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿ.ಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆಯೇ ಎನ್ನುವ ಬಗ್ಗೆಯೇ ಜೋರು ಚರ್ಚೆ ಶುರುವಾಗಿದೆ. ಮುಖ್ಯಮಂತ್ರಿ ಬದಲಾವಣೆಯಿಂದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ವರೆಗೆ ಕಾಂಗ್ರೆಸ್‌ನಲ್ಲಿ ಎಲ್ಲಾ ತರದ ಚರ್ಚೆಗಳು ನಡೆದಿದ್ದು.
ಕಾಂಗ್ರೆಸ್ ಹೈಕಮಾಂಡ್ ಇನ್ನಿಲ್ಲದಂತೆ ಮುಜುಗರಕ್ಕೆ ಒಳಗಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಹೇಳಿದರೂ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಚರ್ಚೆ ನಿಂತಿಲ್ಲ.
ಇಲ್ಲಿಯವರೆಗೆ ಕರ್ನಾಟಕ ಸಚಿವ ಮಂಡಲದ ಶೇ 90%ರಷ್ಟು ಸಚಿವರು ನಾನು ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎಂದು ಹೇಳಿದ್ದಾರೆ.
ಇದೀಗ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಹ ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಮಾತನಾಡಿದ್ದಾರೆ. ಮುಂದಿನ ಮುಖ್ಯಮಂತ್ರಿ ವಿಷಯ ಜೋರಾಗಿ ಚರ್ಚೆಯಾಗುತ್ತಿರುವ ನಡುವೆ ಅವರು ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ. ರಾಜ್ಯದಲ್ಲಿ ಬಹುತೇಕ ಸಚಿವರು, ಹಿರಿಯರು ನಾನೇಕೆ ಮುಖ್ಯಮಂತ್ರಿಯಾಗಬಾರದು. ನಾನು ಸಹ ಮುಖ್ಯಮಂತ್ರಿ ಆಕಾಂಕ್ಷಿ. ಅವಕಾಶ ಸಿಕ್ಕರೆ ನಾನೂ ಸಹ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದಾರೆ. ಆದರೆ, ರಾಮಲಿಂಗಾರೆಡ್ಡಿ ಅವರು ಮಾತ್ರ ರಾಜ್ಯ ಕಾಂಗ್ರೆಸ್ ಸರ್ಕಾರವು ಶೇ 100ರಷ್ಟು ಸುಭದ್ರವಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಖಡಕ್ ಆಗಿ ಉತ್ತರ ನೀಡಿದ್ದಾರೆ.
ರಾಜ್ಯದಲ್ಲಿ ಸಿ.ಎಂ ಚೇಂಜ್ ಆಗಲಿದ್ದಾರೆಯೇ ಎಂದು ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ರಾಜ್ಯದ ಹಲವು ಸಚಿವರು ತಮ್ಮದೇ ಶೈಲಿಯಲ್ಲಿ ಉತ್ತರ ನೀಡಿದ್ದಾರೆ. ಕೆಲವೇ ಕೆಲವರಷ್ಟೇ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಂದುವರಿಯಲಿ ಎಂದಿದ್ದಾರೆ. ಹಲವರು ನಾನು ಸಹ ಮುಖ್ಯಮಂತ್ರಿ ಆಕಾಂಕ್ಷಿ ಎಂದು ಹೇಳಿದ್ದೇ ಹೆಚ್ಚು. ವಿರೋಧ ಪಕ್ಷಕ್ಕಿಂತ ಆಡಳಿತ ಪಕ್ಷದಲ್ಲೇ ಹೆಚ್ಚು ಚರ್ಚೆಯಾಗ್ತಿದೆ.