200ನೇ ವಿಜಯೋತ್ಸವ ಸವಿನೆನಪಿಗೋಸ್ಕರ ವೀರರಾಣಿ ಚೆನ್ನಮ್ಮನ ಸಮಾಧಿ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಹೋರಾಟಗಾರರ ಆಗ್ರಹ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
200ನೇ ವಿಜಯೋತ್ಸವ ಸವಿನೆನಪಿಗೋಸ್ಕರ ವೀರರಾಣಿ ಕಿತ್ತೂರು ಚೆನ್ನಮ್ಮನ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಸ್ಥಳೀಯ ಸಾಮಾಜಿಕ ಹೋರಾಟಗಾರರು, ಅಭಿಮಾನಿಗಳು, ನ್ಯಾಯವಾದಿಗಳು ಒತ್ತಾಯಿಸಿದ್ದಾರೆ.

ಬೈಲಹೊಂಗಲದಲ್ಲೂ ಉತ್ಸವ ಮಾಡಿ: 200ನೇ ಚೆನ್ನಮ್ಮನ ವಿಜಯೋತ್ಸವ ಹಿನ್ನೆಲೆ ಕಿತ್ತೂರಿನಲ್ಲಿ ಅ.23, 24, 25ರಂದು ಮೂರು ದಿನ ಅದ್ಧೂರಿಯಾಗಿ ಉತ್ಸವ ಆಚರಿಸಲಾಗುತ್ತದೆ. ಅ.22ರಂದು ಬೆಳಗಾವಿ ನಗರದಲ್ಲಿ ಒಂದು ದಿನ‌ದ ರಸಮಂಜರಿ ಏರ್ಪಡಿಸಲಾಗಿದೆ. ಅಲ್ಲದೇ ಅ.23ರಂದು ಚೆನ್ನಮ್ಮನ ತವರೂರು ಕಾಕತಿಯಲ್ಲೂ ಕಾರ್ಯಕ್ರಮ ನಡೆಯುತ್ತದೆ. ಅದೇ ರೀತಿ ಚೆನ್ನಮ್ಮನ ಐಕ್ಯಸ್ಥಳ ಬೈಲಹೊಂಗಲದಲ್ಲೂ ಉತ್ಸವ ನಿಮಿತ್ತ ಕಾರ್ಯಕ್ರಮ ಆಯೋಜಿಸುವಂತೆ ಒತ್ತಾಯ ಕೇಳಿ ಬಂದಿದೆ. ಈ ಸಂಬಂಧ ಸಭೆ ಮಾಡಿರುವ ಸ್ಥಳೀಯರು ತಮ್ಮ ಬೇಡಿಕೆ ಈಡೇರದಿದ್ದರೆ ಬರುವ 21 ರಂದು ಬೈಲಹೊಂಗಲ ಬಂದ್ ಕರೆ ನೀಡಲು ಬೈಲಹೊಂಗಲದ ಮೂರುಸಾವಿರ ಮಠದಲ್ಲಿ ಸಭೆ ಸೇರಿ ಇಂದು ಪ ಪೂ ಶ್ರೀ ಪ್ರಭು ನೀಲಕಂಠ ಮಹಾಸ್ವಾಮಿಗಳ ನೇತೃತ್ವದಲ್ಲಿ ನಿರ್ಧರಿಸಿದ್ದಾರೆ.

Post a Comment

0Comments

Post a Comment (0)