ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ರಾಜ್ಯದ ಗದಗ ಹಾವೇರಿ, ಬಳ್ಳಾರಿ, ಚಿತ್ರದು ದಾವಣಗೆರೆ ಹಾಗೂ ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ಸುತ್ತುಮುತ್ತಾ ಮೋಡ ಕವಿದ ವಾತಾವರಣ ಇರಲಿದೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಮಳೆರಾಯ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಂದಿನಿಂದ 1 ವಾರದವೆರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Post a Comment

0Comments

Post a Comment (0)