ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಚಳಿಗಾಲದ ಅಧಿವೇಶನಕ್ಕೂ ಮುನ್ನ ಸರ್ಕಾರ ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಬೇಡಿಕೆ ಈಡೇರಿಸಬೇಕು. ಇಲ್ಲದೆ ಹೋದರೆ ಡಿಸೆಂಬರ್‌ 9ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಗೂ ಟ್ರ್ಯಾಕ್ಟರ್‌ ರ್‍ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಬಸವ ಜಯಮೃತ್ಯುಂಜಯ ಶ್ರೀ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಲಿಂಗಾಯತ ಸಮುದಾಯದ ಮುಖಂಡರ ಸಭೆ ನಡೆಯಿತು. ಸಭೆಯಲ್ಲಿ ಸರ್ಕಾರ ಯಾವುದೇ ನಿರ್ಧಾರಕ್ಕೆ ಬರಲಿಲ್ಲ. ಇದರಿಂದ ಸಿಟ್ಟಾದ ಶ್ರೀಗಳು ಬಿಜೆಪಿ ಮುಖಂಡ ವೀರಣ್ಣ ಕಡಾಡಿ, ಬಸವನ ಗೌಡ ಪಾಟೀಲ್‌ ಯತ್ನಾಳ್‌ ಸೇರಿದಂತೆ ಸಮುದಾಯದ ವಕೀಲರ ಜತೆ ಗಾಂಧಿಭವನದಲ್ಲಿ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಿದರು.
ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಶ್ರೀಗಳು, ಸರ್ಕಾರ ನಿರ್ಧಾರದಿಂದ ಪಂಚಮಸಾಲಿ ಮೀಸಲು ಹೋರಾಟ ಸಮಿತಿ ಅಸ ಮಾ ಧಾ ನ ಗೊಂಡಿ ದೆ. ಆ ಹಿನ್ನೆಲೆಯಲ್ಲಿ ಸರ್ಕಾರ ಚಳಿಗಾಲದ ಅಧಿವೇಶನಕ್ಕೂ ಮುನ್ನ ಬೇಡಿಕೆ ಈಡೇರಿಸಬೇಕು. ಇಲ್ಲದೆ ಹೋದರೆ ಬೆಳಗಾವಿಯ ಸುವರ್ಣಸೌಧ ಮುಂದೆ ಟ್ರ್ಯಾಕ್ಟರ್‌ ನಿಲ್ಲಲಿವೆ. ಎಲ್ಲ ಲಿಂಗಾಯತ ಸಮುದಾಯಗಳು ಒಟ್ಟಾಗಿ ಸೇರಿ ಹೋರಾಟ ನಡೆಸಲಿವೆ ಎಂದರು.

Post a Comment

0Comments

Post a Comment (0)