ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ವಿವಿಧ ಕಾಮಗಾರಿಗಳಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಶಂಕುಸ್ಥಾಪನೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರನ್ನು ದೇಶದಿಂದ ತೊಲಗಿಸಲು ದಿಟ್ಟತನದಿಂದ ಹೋರಾಡಿದ ವೀರ ಮಹಿಳೆ ಕ್ರಾಂತಿಯ ನಾಡಿನ ಕಿತ್ತೂರು ಚೆನ್ನಮ್ಮಳ 200 ವಿಜಯೋತ್ಸವದ ಕಾರ್ಯಕ್ರಮದ ಅಂಗವಾಗಿ ಕಿತ್ತೂರು ಪ್ರಾಧಿಕಾರದ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆಯನ್ನು ನೆರವೇರಿಸುವ ಮೂಲಕ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಸರ್ಕಾರದಿಂದ  ಸುಮಾರು 30 ಕೋಟಿ ವೆಚ್ಚದಲ್ಲಿ ವಿದ್ಯುನ್ಮಾನ ಮಾದರಿಯ ಉದ್ಯಾನ ವನ ನಿರ್ಮಾಣ ಮಾಡುವುದಾಗಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಭವಿಷ್ಯದಲ್ಲಿ ಕಿತ್ತೂರು ನಾಡಿನ ಇತಿಹಾಸ ಉಳಿಸಲು ಕಿತ್ತೂರು ಕೋಟೆಯ ಐತಿಹಾಸಿಕ ಅವಶೇಷಗಳ ಸಂರಕ್ಷಿಸಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಕಿತ್ತೂರು ಕೋಟೆಯನ್ನು ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.
30 ಕೋಟಿ ಅನುದಾನದಲ್ಲಿ ಹೊಸ ತಂತ್ರಜ್ಞಾನ ಬಳಕೆಯ ಮೂಲಕ ವಿದ್ಯುನ್ಮಾನ ಮಾದರಿಯ ಉದ್ಯಾನವನ (ಥೀಮ್ ಪಾರ್ಕ್) ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಕೋಟೆಯ ಕೆಲವು ಭಾಗ ಶೀಥಿಲಗೊಂಡಿದ್ದು, ಇನ್ನಷ್ಟು ದುರಸ್ಥಿ ಕಾಮಗಾರಿಯ ಅವಶ್ಯಕತೆಯಿದೆ. ಕೋಟೆಯ ಕುಸಿದ ಗೋಡೆಗಳನ್ನು ನವೀಕರಿಸಿ ಕೋಟೆ ಅವಶೇಷಗಳ ಸಂರಕ್ಷಣೆಯ ಮೂಲಕ ಇತಿಹಾಸ ಉಳಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ಕಿತ್ತೂರಿನ 200 ವರ್ಷದ ವಿಜಯೋತ್ಸವದಲ್ಲಿ ಈ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ಉದ್ದೇಶವಾಗಿತ್ತು. ಆದರೆ ಇನ್ನಷ್ಟು ಭದ್ರ ಕೆಲಸವಾಗಬೇಕು ಎಂಬುದು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಸಮಯ ತೆಗೆದುಕೊಂಡು ಕಾಮಗಾರಿಗಳನ್ನು ಪ್ರಾರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.
ಕೋಟೆ ಮರು ನಿರ್ಮಾಣದ ಚಿಂತನೆ ಇದೆ. ಆದರೆ ಅರಮನೆಯ ಮೂಲ ವಿನ್ಯಾಸದ ಮಾಹಿತಿಯಿಲ್ಲದ ಕಾರಣ ಮರು ನಿರ್ಮಾಣ ವಿಳಂಬವಾಗುತ್ತಿದೆ. ಸದ್ಯ ಉಳಿದ ಅವಶೇಷಗಳನ್ನು ಸಂರಕ್ಷಣೆ ಮಾಡುವ ಉದ್ದೇಶದಿಂದ ತ್ವರಿತವಾಗಿ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ಉತ್ತರ ಕರ್ನಾಟಕದ ಕಿತ್ತೂರು ಭಾಗವನ್ನು ದೊಡ್ಡ ಪ್ರವಾಸಿ ತಾಣವಾಗಿ ಮಾರ್ಪಡು ಮಾಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ.
30 ಕೋಟಿ ಅನುದಾನದಲ್ಲಿ ಕಿತ್ತೂರು ಇತಿಹಾಸವನ್ನು ಇಂದಿನ ಪೀಳಿಗೆ ಪರಿಚಯಿಸಲು ಆಧುನಿಕ ಮಾದರಿಯ ಉದ್ಯಾನವನ ನಿರ್ಮಾಣ ಮಾಡಲು ಸದ್ಯದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು.
ಈ ಬಾರಿ ಕಿತ್ತೂರು ಉತ್ಸವಕ್ಕೆ 5 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅತ್ಯಂತ ಅದ್ದೂರಿಯಾಗಿ ಆಚರಿಸಲಾಗುವುದು ಎಂದರು.
ಇದಕ್ಕೂ ಮುಂಚೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಕಿತ್ತೂರು ಕೋಟೆ ಆವರಣದಲ್ಲಿ ರೂ. 12.11 ಕೋಟಿ ಹಾಗೂ 2.4 ಕೋಟಿ ಅನುದಾನದ ಚನ್ನಮ್ಮನ ಕಿತ್ತೂರಿನ ಕೋಟೆ, ಅರಮನೆ ಅವಶೇಷಗಳ ಸಂರಕ್ಷಣೆಯ ವಿವಿಧ ಕಾಮಗಾರಿಯ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ಶಂಕು ಸ್ಥಾಪನೆಯ ಕಾರ್ಯಕ್ರಮದಲ್ಲಿ 
ಚನ್ನಮ್ಮನ ಕಿತ್ತೂರಿನ ರಾಜಗುರು ಕಲ್ಮಠ ಪರಮಪೂಜ್ಯ ಶ್ರೀ ಮಡಿವಾಳ ರಾಜಯೋಗೇಂದ್ರ ಮಹಾಸ್ವಾಮಿಗಳು ಹಾಗೂ ನಿಚ್ಚನಕಿ ಶ್ರೀಗಳು ದಿವ್ಯ ಸಾನಿಧ್ಯದಲ್ಲಿ ಕ್ಷೇತ್ರದ ಶಾಸಕರಾದ ಬಾಬಾ ಸಾಹೇಬ್ ಪಾಟೀಲ, ಮಾನ್ಯ ಜಿಲ್ಲಾಧಿಕಾರಿಗಳಾದ ಮಹಮ್ಮದ್ ರೋಷನ್, ಉಪವಿಭಾಗಾಧಿಕಾರಿಗಳು ಬೈಲಹೊಂಗಲ, ಚನ್ನಮ್ಮನ ಕಿತ್ತೂರು ತಹಸಿಲ್ದಾರ್, ಪೊಲೀಸ್ ಅಧಿಕಾರಿಗಳು ಹಾಗೂ ಚೆನ್ನಮ್ಮನ ಕಿತ್ತೂರಿನ ಸಾರ್ವಜನಿಕರು ಉಪಸ್ಥಿತರಿದ್ದರು.

Post a Comment

0Comments

Post a Comment (0)