19-11-2024
ವರದಿ ಚನ್ನಪ ಎಸ್ ಪಣದಿ
*ಮೂರಗೋಡ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ರಸ್ತೆ ಬಂದ್ ಮಾಡಿ ಪ್ರತಿಭಟನೆ
*
ಯರಗಟ್ಟಿ - ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಸಮಗ್ರ ಅಭಿವೃದ್ದಿಗಾಗಿ ಕರವೇ ಹಾಗೂ ಹಲವು ಸಂಘಟನೆಗಳ ಮುಖಾಂತರ ರಸ್ತೆ ತಡೆದು ಪ್ರತಿಭಟನೆ ಮಾಡಲಾಯಿತು.
ಈ ಹಿಂದೆಯೂ ಅನೇಕ ಬಾರಿ ಹೋರಾಟ ಮಾಡಿ ಗ್ರಾಮದ ಸರಕಾರಿ ಕಚೇರಿಗಳು ಹಾಗೂ ಸ್ಥಳೀಯ ಸಮಸ್ಯೆಗಳ ಕುರಿತು ಅಭಿವೃದ್ದಿ ಪಡಿಸುವಂತೆ ಮನವಿ ಮಾಡಲಾಗಿತ್ತು.
ಆದರೆ ಇದಕ್ಕೆ ಯಾವುದೇ ಸ್ಪಂದನೆ ನೀಡದೆ ಹಿನ್ನೆಲೆಯಲ್ಲಿ ಈ ಬಾರಿ ರಸ್ತೆ ತಡೆದು ಸಂಬಂಧ ಪಟ್ಟ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಷ ವ್ಯಕ್ತ ಪಡಿಸಿದರು.
ಪ್ರತಿಭಟನೆಗೆ ಎಚ್ಚೆತ್ತುಕೊಂಡು ತಾಲೂಕಾ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರಾರ ಮನವೊಲಿಸಿ ಎಲ್ಲ ಸಮಸ್ಯೆಗಳನ್ನೂ ಆದಷ್ಟು ಬೇಗ ಪರಿಹರಿಸುವುದಾಗಿ ಆಶ್ವಾಸನೆ ನೀಡಿದರು.