ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ. ರಾಜ್ಯಪಾಲರ ಅಧಿಕಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ. ರಾಜ್ಯಪಾಲರ ಅಧಿಕಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್ ಹಾಕಲಾಗಿದೆ. ಇಂತಹ ಮಹತ್ವದ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.
ಇಂದಿನ ಸಂಪುಟ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಯುನಿವರ್ಸಿಟಿ ತಿದ್ದುಪಡಿ ವಿಧೇಯಕಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ.

ಈ ವಿಧೇಯಕಕ್ಕೆ ತಿದ್ದುಪಡಿ ತರಲು ಕ್ಯಾಬಿನೇಟ್ ಅನುಮೋದನೆ ನೀಡಿದ್ದರಿಂದಾಗಿ, ರಾಜ್ಯಪಾಲರ ಅಧಿಕಾರ ಮೊಟಕಾಗಲಿದೆ. ಇಷ್ಟು ದಿನ ಚಾನ್ಸೆಲರ್ ಆಗಿದ್ದರು. ಇನ್ಮುಂದೆ ಮುಖ್ಯಮಂತ್ರಿಗಳೇ ಚಾನ್ಸಲರ್ ಆಗಲಿದ್ದಾರೆ. ರಾಜ್ಯಪಾಲರ ಬಳಿ ಇದ್ದ ಅಧಿಕಾರವನ್ನು ಹಿಂಪಡೆದು ಮುಖ್ಯಮಂತ್ರಿಗಳಿಗೆ ನೀಡಿದ ಕ್ಯಾಬಿನೆಟ್ ನೀಡಿದೆ.

Post a Comment

0Comments

Post a Comment (0)