ಬೆಂಗಳೂರು: ರೈತರು ಮತ್ತು ಹಾಲು ಒಕ್ಕೂಟಗಳು ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರೂ.ಗೆ ಹೆಚ್ಚಿಸಲು ಮನವಿ ಮಾಡಿದ್ದು, ಈ ಬಗ್ಗೆ ಚಳಿಗಾಲದ ಅಧಿವೇಶನದ ಅನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.
Ad...
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಮತ್ತೆ ಹಾಲಿನ ದರ ಏರಿಕೆಯ ಪರೋಕ್ಷ ಸುಳಿವು ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಹಾಲಿನ ದರ ಏರಿಕೆಯ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದ್ದರು. ಕಳೆದ ಜೂನ್‌ನಲ್ಲಿ ನಂದಿನಿ ಪ್ರತಿ ಪಾಕೆಟ್‌ನಲ್ಲಿ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ ಮತ್ತೆ ದರ ಏರಿಕೆಯ ಸುಳಿವು ಹೊರಬಿದ್ದಿದೆ.