ರಾಮ ಜನ್ಮಭೂಮಿಯಲ್ಲಿ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಯಾಗಿ 1 ವರ್ಷ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಅಯೋಧ್ಯೆ: ರಾಮ ಜನ್ಮಭೂಮಿಯಲ್ಲಿ ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಯಾಗಿ 1 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ 3 ದಿನಗಳ ಕಾಲ ಭರ್ಜರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಡೀ ನಗರವನ್ನು ಹೂವಿನಿಂದ ಅಲಂಕರಿಸಲಾಗಿದ್ದು, ಬಾಲರಾಮನ ದರ್ಶನಕ್ಕೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಸಕಲ ವ್ಯವಸ್ಥೆಯನ್ನು ರೂಪಿಸಲಾಗಿದೆ.
ಶನಿವಾರದಿಂದ ಸೋಮವಾರದವರೆಗೆ ರಾಮ ಮಂದಿರಲ್ಲಿ ವಿಶೇಷ ಕಾರ್ಯಕ್ರಮಗಳು ಜರುಗಲಿದ್ದು, ಶನಿವಾರ ಬೆಳಿಗ್ಗೆ 10 ಗಂಟೆಗೆ ಬಾಲ ರಾಮನ ಮೂರ್ತಿಗೆ ಅಭಿಷೇಕ ಮಾಡುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಭಿಷೇಕದ ಬಳಿಕ ಚಿನ್ನ ಮತ್ತು ಬೆಳ್ಳಿಯನ್ನು ಹೊಂದಿರುವ ಪೀತಾಂಬರದಿಂದ ರಾಮನ ಮೂರ್ತಿಗೆ ಅಲಂಕಾರ ಮಾಡಲಾಗುತ್ತದೆ. 12.20ಕ್ಕೆ ಮಹಾ ಮಂಗಳಾರತಿ ನಡೆಯಲಿದ್ದು, ಬಳಿಕ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕೊಡಲಾಗುತ್ತದೆ.
110 ಮಂದಿ ವಿಶೇಷ ಆಹ್ವಾನಿತರು: ರಾಮಮಂದಿರದ ಮೊದಲ ವಾರ್ಷಿಕೋತ್ಸವಕ್ಕೆ 110 ಮಂದಿಯನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ. ರಾಮಮಂದಿರ ಉದ್ಘಾಟನೆಯನ್ನು ತಪ್ಪಿಸಿಕೊಂಡ ವರನ್ನು ಆಹ್ವಾನಿಸಲಾಗಿದೆ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಮುಖ್ಯಸ್ಥ ಚಂಪತ್‌ ರಾಯ್‌ ಹೇಳಿದ್ದಾರೆ. ಈ ಬಾರಿ ಸಾರ್ವಜನಿಕರಿಗೂ ಅವಕಾಶ ಒದಗಿಸಲಾಗಿದೆ. ಅಂಗದ್‌ ತಿಲಾ ಬಳಿ 5,000 ಮಂದಿ ಕೂರಬಹುದಾದಷ್ಟು ದೊಡ್ಡ ಪೆಂಡಾಲ್‌ ನಿರ್ಮಾಣ ಮಾಡಲಾಗಿದೆ. ಇದಲ್ಲದೇ ಯಾಗ ಮಂಟಪಗಳಲ್ಲಿ ನಿರಂತವಾಗಿ ನಡೆಯುವ ಹೋಮ, ಹವನಗಳನ್ನು ನೋಡಲು ಸಹ ಅವಕಾಶ ಒದಗಿಸಲಾಗಿದೆ.

Post a Comment

0Comments

Post a Comment (0)