ಬೈಲಹೊಂಗಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆರೋಗ್ಯ ವಿಚಾರಿಸಿದ ಮಠಾಧೀಶರು
ಬೈಲಹೊಂಗಲ : ವಾಹನ ಅಪಘಾತಕ್ಕೀಡಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸೋಮವಾರ ಮುರಗೋಡ ನೀಲಕಂಠ ಸ್ವಾಮಿಜಿ, ಬೈಲಹೊಂಗಲ ಶಾಖಾ ಮೂರುಸಾವಿರಮಠದ ಪ್ರಭು ನೀಲಕಂಠ ಸ್ವಾಮಿಜಿ, ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಡಾ. ಮಹಾಂತೇಶ ಶಾಸ್ತ್ರೀ ಆರಾದ್ರಿಮಠ ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗಿ ಎಂದು ಹಾರೈಸಿದರು.