ಬೈಲಹೊಂಗಲ: ಶ್ರೀ ಸೋಮೇಶ್ವರ ಸಕ್ಕರೆ ಕಾರ್ಖಾನೆಗಳಿಗೆ ಬಯೋ ಗ್ಯಾಸ್‌ಗೆ ಬೆಂಕಿ -ಅಪಾರ ಹಾನಿ.
ಬೈಲಹೊಂಗಲ: ಸಮೀಪದ ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿರುವ ಬಯೋ ಗ್ಯಾಸ್‌ಗೆ ಸೋಮವಾರ ಸಂಜೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿಗಳ ಹಾನಿಯಾಗಿದೆ.
ಬಯೋ ಗ್ಯಾಸ್‌ಗೆ ಬೆಂಕಿ ತಗುಲಿದ್ದರಿಂದ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಜಿಗಿಯುತ್ತಿದೆ. ಗಾಳಿ ಹೆಚ್ಚಾಗಿದ್ದರಿಂದ ಬೆಂಕಿಯನ್ನು ನುಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಮಿಕರು ಹರಸಾಹಸಪಟ್ಟರು. ಬೈಲಹೊಂಗಲ, ಕಿತ್ತೂರು, ಧಾರವಾಡದಿಂದ ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸಲು ನಿರಂತರ ಪ್ರಯತ್ನ ಪಡುತ್ತಿದ್ದಾರೆ.
ಘಟನಾ ಸ್ಥಳದಲ್ಲಿ ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಸುಮಾ ಗೋರಬಾಳ, ಗಂಗಾಧರ ಹಂಪನ್ನವರ,ಆಗ್ನಿ ಶಾಮಕ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ದೊಡವಾಡ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.