ಬೈಲಹೊಂಗಲ : ಮುಸ್ಲಿಂ ರಿಗಾಗಿ ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಹೇಳಿದ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಡಿ ಕೆ ಶಿವಕುಮಾರ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿ ಪ್ರತಿಭಟನೆ ನಡೆಸಿದರು.
ಬಿಜೆಪಿ ಮುಖಂಡ ವಿಜಯ್ ಮೆಟಗುಡ, ಮಂಡಲ ಅಧ್ಯಕ್ಷ ಸುಭಾಷ್ ತುರಮರಿ,ಹಿರಿಯ ಮುಖಂಡರಾದ ಗುರುಪಾದ ಕಳ್ಳಿ, ಸುನಿಲ್ ಮರಕುಂಬಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ ಕಡಿ, ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ವಿಶಾಲ ಬೋಗೂರ ಹಾಗೂ ಪ್ರಮುಖ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.