ಬೆಳಗಾವಿ ಲೋಕಸಭಾ ಕ್ಷೇತ್ರದ ಜನರ ಅನೇಕ ದಿನಗಳ ಬೇಡಿಕೆ ಅನುಷ್ಠಾನದ ಕುರಿತು ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಭೇಟಿ...
ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್, ಮಾನ್ಯ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ರಾಜ್ಯಸಭಾ ಸದಸ್ಯ ಶ್ರೀ ಈರಣ್ಣ ಕಡಾಡಿ ಜೊತೆಗೂಡಿ ಭೇಟಿ...
ಬಹು ದಿನಗಳ ಬೇಡಿಕೆಯಾದ ಲೋಕಾಪುರ್ ರಾಮದುರ್ಗ ಮಾರ್ಗವಾಗಿ ಸವದತ್ತಿ ಯಲ್ಲಮ್ಮನ ಕ್ಷೇತ್ರಕ್ಕೆ ರೈಲು ಮಾರ್ಗ ಸೂಚಿಗೆ ಚರ್ಚಿಸಲು ಭೇಟಿ...
ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಜೊತೆಗೂಡಿ ಇಂದು ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರನ್ನು ನವ-ದೆಹಲಿಯ ಅವರ ಕಛೇರಿಯಲ್ಲಿ ಭೇಟಿ ಮಾಡಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಜನರ ಅನೇಕ ದಿನಗಳ ಬೇಡಿಕೆ ಅನುಷ್ಠಾನದ ಕುರಿತು ಚರ್ಚಿಸಿದರು.
ಪ್ರಾರಂಭದಲ್ಲಿ ಲೋಕಾಪೂರ - ರಾಮದುರ್ಗ - ಸವದತ್ತಿ - ಧಾರವಾಡ ನಡುವೆ ನೂತನ ರೈಲು ಮಾರ್ಗ ರಚನೆಯ ಅಂಗವಾಗಿ ಪ್ರಾರಂಭಿಕವಾಗಿ ಅವಶ್ಯಕತೆಯನಿಸಿರುವ "ಮಾರ್ಗ ಸಮೀಕ್ಷೆ" ನಡೆಸುವ ಬಗ್ಗೆ ಪ್ರಸ್ತಾಪಿಸಲಾಗಿ, ಸವದತ್ತಿಯ ಶ್ರೀ ರೇಣುಕಾದೇವಿಯ ಲಕ್ಷಾಂತರ ಭಕ್ತಾಧಿಗಳ ಅನುಕೂಲಕ್ಕಾಗಿ ಈ ಮಾರ್ಗ ರಚನೆ ತುಂಬಾ ಅವಶ್ಯಕತೆ ಇರುವ ಬಗ್ಗೆ ಕೇಂದ್ರ ಸಚಿವರಲ್ಲಿ ಮನವರಿಕೆ ಮಾಡಿ ಕೊಡುತ್ತಾ ಸಮೀಕ್ಷೆ ಕಾರ್ಯ ಕೈಕೊಳ್ಳುವ ಬಗ್ಗೆ ಶೀಘ್ರ ಆದೇಶಕ್ಕಾಗಿ ಕೇಂದ್ರ ಸಚಿವರಲ್ಲಿ ಒತ್ತಾಯಿಸಿದರು.
ಮುಂದುವರೆದು, ಬೆಳಗಾವಿ ರಹವಾಸಿಗಳ ಅನಕೂಲಕ್ಕಾಗಿ ಅನೇಕ ದಿನಗಳ ಬಯಕೆಯನಿಸಿರುವ ಬೆಂಗಳೂರು - ಧಾರವಾಡ ನಡುವೆ ಸಂಚರಿಸುವ ವಂದೇ ಭಾರತ ರೈಲು ಸೇವೆಯನ್ನು ಬೆಳಗಾವಿ ವರೆಗೆ ವಿಸ್ತರಿಸುವ ಬಗ್ಗೆ ಪ್ರಸ್ತಾಪಿಸಲಾಗಿ ಅನೇಕ ದಿನಗಳಿಂದ ಈ ಬೇಡಿಕೆ ಇದ್ದು ಇದನ್ನು ಕೂಡಲೆ ನೆರೆವೆರಿಸಿ ಕೊಡಲು ಸಹ ಕೋರಲಾಯಿತು.
ಇನ್ನು ಬೆಳಗಾವಿ-ಮಿರಜ್ ನಡುವೆ ದಿನನಿತ್ಯ ಸಂಚರಿಸುವ ಪ್ಯಾಸೆಂಜರ್ ರೈಲು ಸೇವೆಯನ್ನು ಪ್ರತಿ ಮಾಹೆ ವಿಸ್ತರಿಸುತ್ತಾ ಬಂದಿರುವ ಸೇವೆ ಈಗ ಇದನ್ನು ಖಾಯಂ ಆಗಿ ಸಂಚರಿಸುವ ನಿಟ್ಟಿನಲ್ಲಿ ನೋಡಿಕೊಳ್ಳುವ ಕುರಿತು ಅಗತ್ಯ ಆದೇಶಕ್ಕಾಗಿ ಸಹ ಈ ಸಂದರ್ಭದಲ್ಲಿ ವಿನಂತಿಸಲಯಿತು.
ಈ ಮೂರು ಬೇಡಿಕೆಗಳ ಬಗ್ಗೆ ಅವಲೋಕಿಸಿದ ಕೇಂದ್ರ ರೇಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ನೂತನ ಲೋಕಾಪೂರ - ರಾಮದುರ್ಗ - ಸವದತ್ತಿ - ಧಾರವಾಡ ರೈಲು ಮಾರ್ಗ ಸಮೀಕ್ಷೆ ಕಾರ್ಯ ಪ್ರಾರಂಭಕ್ಕೆ ಆದೇಶಿಸುವ ಬಗ್ಗೆ ಮತ್ತು ಬೆಂಗಳೂರು - ಧಾರವಾಡ ನಡುವೆ ಸಂಚರಿಸುವ "ವಂದೇ ಭಾರತ" ರೈಲು ಸೇವೆಯನ್ನು ಬೆಳಗಾವಿ ನಗರದ ವರೆಗೆ ಖಂಡಿತ ವಿಸ್ತರಿಸುವ ಬಗ್ಗೆ ಶೀಘ್ರದಲ್ಲಿ ನಿರ್ಧಾರ ಪ್ರಕಟಿಸುವ ಬಗ್ಗೆಯೂ ಹಾಗೂ ಬೆಳಗಾವಿ - ಮಿರಜ್ ನಡುವೆ ದಿನನಿತ್ಯ ಸಂಚರಿಸುವ (ತಾತ್ಕಾಲಿಕ) ಪ್ಯಾಸೆಂಜರ್ ರೈಲು ಸೇವೆಯನ್ನು ಖಾಯಂ ಆಗಿ ಒದಗಿಸುವ ಬಗ್ಗೆ ಇಷ್ಟರಲ್ಲಿಯೇ ಅಗತ್ಯ ಕ್ರಮವನ್ನು ಕೈಕೊಳ್ಳುವ ಬಗ್ಗೆ ಭರವಸೆಯನ್ನು ನೀಡಿರುವುದಾಗಿ ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ ಇವರು ಮತ್ತು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ ಸಹ ಈ ಸಭೆಯಲ್ಲಿ ಭಾಗವಹಿಸಿದ್ದು, ಬೇಡಿಕೆ ಈಡೇರಿಸುವ ಬಗ್ಗೆ ಕೇಂದ್ರ ರೇಲ್ವೆ ಸಚಿವರಲ್ಲಿ ಇವರೊಂದಿಗೆ ಧ್ವನಿ ಗೂಡಿಸಿ ಅವುಗಳ ಈಡೇರಿಕೆಗೆ ಒತ್ತಾಯಿಸಿರುವರು.