ಬೈಲಹೊಂಗಲ: ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡಸಿ ಎಬಿವಿಪಿ ಪ್ರತಿಭಟನೆ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೈಲಹೊಂಗಲ: ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡಸಿ ಎಬಿವಿಪಿ ಪ್ರತಿಭಟನೆ

ಬೈಲಹೊಂಗಲ: ಕಾಶ್ಮೀರದ ಪಹಲ್ಲಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ನಡೆಸಿರುವ ದಾಳಿ ಅತ್ಯಂತ ಹೇಯ ಮತ್ತು ಹೇಡಿತನದ ಕೃತ್ಯವಾಗಿದೆ. ಇದಕ್ಕೆ ಕಾರಣರಾದ ಉಗ್ರಗಾಮಿಗಳನ್ನು ಯಾವ ಮುಲಾಜೂ ಇಲ್ಲದೆ ಮಟ್ಟ ಹಾಕಬೇಕು ಎಂದು ಎಬಿವಿಪಿ ವಿದ್ಯಾರ್ಥಿಗಳು ಬುಧವಾರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಚೆನ್ನಮ್ಮ ಸಮಾಧಿಯಿಂದ ರಾಯಣ್ಣ ವೃತ್ತವರೆಗೆ ಪ್ರತಿಭಟನೆ ನಡೆಸಲಾಯಿತು.ಎಬಿವಿಪಿ ಜಿಲ್ಲಾ ಸಂಚಾಲಕ ರಾಘವೇಂದ್ರ ಸನ್ನೆ ಮಾತನಾಡಿ,ಕಾಶ್ಮೀರ ಪ್ರವಾಸಕೆಂದು ತೆರಳಿದ ಅಮಾಯಕರ ಮೇಲೆ ಗುಂಡಿನ ದಾಳಿ ಮಾಡಿರುವುದು ಅತ್ಯಂತ ಹೀನ ಕೃತ್ಯ.ವಾಗಿದೆ. ಕೂಡಲೇ ಭಯೋತ್ಪಾದಕರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

Post a Comment

0Comments

Post a Comment (0)