ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ರಸ್ತೆ ಅಪಘಾತ ..

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಚನ್ನಮ್ಮನ ಕಿತ್ತೂರು : ಸಮೀಪದ ಅಂಬಡಗಟ್ಟಿ ಕಲ್ಯಾಣ ಮಂಟಪದ ಎದುರು ರಾಷ್ಟ್ರೀಯ ಹೆದ್ದಾರಿ ಮೇಲೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯ ನಾಗರಿಕರಿಂದ ಮಾಹಿತಿ ಲಭ್ಯವಾಗಿದ್ದು. MH ಪಾಸಿಂಗ್ ಹೊಂದಿರುವ ಕರಿ ಬಣ್ಣದ ಕಾರು ರಭಸವಾಗಿ ಬಂದು ಅಮಾಯಕ ವ್ಯಕ್ತಿಗೆ ತಗುಲಿರುವ ಕಾರಣ ಸ್ಥಳದಲ್ಲೇ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಸ್ಥಳೀಯವಾಗಿ ಮಾಹಿತಿ ಲಭ್ಯವಾಗಿದೆ.
ಇದೇ ಸ್ಥಳದಲ್ಲಿ ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಿದ್ದರು. ನ್ಯಾಷನಲ್ ಹೈವೇ ಅಧಿಕಾರಿಗಳು ಎಚ್ಚೆತ್ತುಕೊಳ್ಳದೆ ಸ್ಥಳೀಯವಾಗಿ ಸೂಕ್ತ ವ್ಯವಸ್ಥೆಯನ್ನು ಮಾಡದೆ ಸ್ಥಳೀಯ ಗ್ರಾಮಸ್ಥರ ಆಕ್ರೋಶಕ್ಕೂ ಕಾರಣವಾಗಿದ್ದಾರೆ.
ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ಕಿತ್ತೂರು ಠಾಣೆಯಲ್ಲಿ ದಾಖಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

Post a Comment

0Comments

Post a Comment (0)