@ ಜೂನ್ 8 ರಂದು ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
@ ಇಂದು ಉತ್ತರ ಕರ್ನಾಟಕದ 11ಜಿಲ್ಲೆಗಳಿಗೆ ಭಾರಿ ಮಳೆ
ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ವ್ಯಾಪಕವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಬಿಡುವು ನೀಡಿದ್ದ ಮಳೆರಾಯ ನಾಳೆಯಿಂದ ಮತ್ತೆ ಅಬ್ಬರಿಸುವ ಸಾಧ್ಯತೆ ದಟ್ಟವಾಗಿದೆ. ಇಂದು (ಜೂನ್ 7) ಉತ್ತರ ಕರ್ನಾಟಕದ 11 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಿದ್ದು, ಜೂನ್ 8 ರಂದು ರಾಜ್ಯದಾದ್ಯಂತ ವ್ಯಾಪಕ ಮಳೆಯಾಗಲಿದೆ.
ಇಂದು ಎಲ್ಲೆಲ್ಲಿ ಮಳೆ?
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಿಗೆ ಭಾರಿ ಮಳೆಯಾಗಲಿದ್ದು, ಇಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಕೃಷ್ಣಾ ನದಿ ಪ್ರದೇಶದಲ್ಲಿ ಪ್ರವಾಹ ಮುನ್ನೆಚ್ಚರಿಕೆ
ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ವ್ಯಾಪಕವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ನೀರು ಹೊರಬಿಡುವ ಸಾಧ್ಯತೆ ಇದೆ. ಕೆಳಭಾಗದ ನದಿ ತೀರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.